ಶೇ.7.5 ಮೀಸಲಾತಿ ಮತ್ತು ಅಯೋಧ್ಯೆಯಲ್ಲಿ ಮಹರ್ಷಿ ವಾಲ್ಮೀಕಿ ಪುತ್ಥಳಿ ನಿರ್ಮಾಣ ಸೇರಿ ಹಲವು ಬೇಡಿಕೆ ಮುಂದಿಟ್ಟ ವಾಲ್ಮಿಕಿ ಸಮುದಾಯ…

ದಾವಣಗೆರೆ,ಜ,2,2020(www.justkannada.in): ದಾವಣಗೆರೆಯ ರಾಜನಹಳ್ಳಿ ಶ್ರೀ ವಾಲ್ಮೀಕಿ ಮಠದ ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿ ನೇತೃತ್ವದಲ್ಲಿ ವಾಲ್ಮೀಕಿ ಜಾತ್ರಾ ಮಹೋತ್ಸವದ ಪ್ರಯುಕ್ತ ಪೂರ್ವಭಾವಿ ಸಭೆ ನಡೆಸಲಾಯಿತು.

ಸಭೆಯಲ್ಲಿ ಸಚಿವರಾದ ಶ್ರೀರಾಮುಲು, ಸಂಸದ ದೇವೇಂದ್ರಪ್ಪ, ಶಾಸಕರಾದ ರಘುಮೂರ್ತಿ, ಪ್ರತಾಪ್ ಗೌಡ ಪಾಟೀಲ್, ರಾಮಚಂದ್ರಪ್ಪ, ಶಿವನಗೌಡ ನಾಯಕ್ ಮತ್ತಿತರ ಶಾಸಕರು ಹಾಜರಿದ್ದರು. ಕರ್ನಾಟಕ ವಾಲ್ಮೀಕಿ ಮಹಾಸಭಾದ ಅಧ್ಯಕ್ಷ ಚಂದ್ರಶೇಖರಪ್ಪ ಸೇರಿದಂತೆ ವಾಲ್ಮೀಕಿ ಸಮುದಾಯದ ಮತ್ತಿತರ ಮುಖಂಡರೂ ಭಾಗಿಯಾಗಿದ್ದರು.

ಸಭೆಯಲ್ಲಿ ರಾಜಕೀಯ ಮುಖಂಡರು ವಾಲ್ಮೀಕಿ ಮಠದ ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿ ನೇತೃತ್ವದಲ್ಲಿ ಹಲವು ಬೇಡಿಕೆಗಳನ್ನ ಮುಂದಿಟ್ಟಿದ್ದಾರೆ. ವಾಲ್ಮೀಕಿ ಸಮುದಾಯಕ್ಕೆ ಶೇ.7.5 ಮೀಸಲಾತಿ ನೀಡಬೇಕು. ಭಾರತ ಸರ್ಕಾರ ಅಯೋಧ್ಯೆಯಲ್ಲಿ ಮಹರ್ಷಿ ವಾಲ್ಮೀಕಿ ಪುತ್ಥಳಿ ನಿರ್ಮಾಣ ಮಾಡುವುದು ಸೇರಿ

ವಾಲ್ಮೀಕಿ ಸಮುದಾಯದ ಬೇಡಿಕೆಗಳು

* ವಾಲ್ಮೀಕಿ ಸಮುದಾಯಕ್ಕೆ ಶೇ.7.5 ಮೀಸಲಾತಿ ನೀಡಬೇಕು.

*  ನಕಲಿ ಜಾತಿ ಪ್ರಮಾಣ ಪತ್ರ ಹಾವಳಿ ತಪ್ಪಿಸಬೇಕು.

*  ರಾಜ್ಯ ಸರ್ಕಾರ ಗಿರಿಜನ ವಿಶ್ವವಿದ್ಯಾಲಯ ಸ್ಥಾಪನೆ ಮಾಡಬೇಕು.

*  ಹಂಪಿ ವಿಶ್ವವಿದ್ಯಾಲಯಕ್ಕೆ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯ ಎಂದು ಘೋಷಣೆ ಮಾಡಬೇಕು.

* ಎಸ್.ಟಿಗೆ ಪ್ರತ್ಯೇಕ ಸಚಿವಾಲಯ ನಿರ್ಮಾಣ ಮಾಡಬೇಕು.

*  ಈ ಬೇಡಿಕೆಗಳ ಬಗ್ಗೆ ರಾಜ್ಯ ಸರ್ಕಾರ ಬಜೆಟ್ ನಲ್ಲಿ ಘೋಷಣೆ ಮಾಡಬೇಕು.

*  ಭಾರತ ಸರ್ಕಾರ ಅಯೋಧ್ಯೆಯಲ್ಲಿ ಮಹರ್ಷಿ ವಾಲ್ಮೀಕಿ ಪುತ್ಥಳಿ ನಿರ್ಮಾಣ ಮಾಡಬೇಕು.

Key words: 7.5% reservation – construction – Maharishi Valmiki- demanding- leaders.