Sunday, September 20, 2026

BDA Apartments

ಕುತೂಹಲ ಮೂಡಿಸಿದ ಮಂಗಳೂರು ಪೊಲೀಸ್ ಕಮಿಷನರ್ ಡಾ.ಹರ್ಷಾರಿಂದ ಮಾಜಿ ಸಿಎಂ ಹೆಚ್...
Home Front Page ಕುತೂಹಲ ಮೂಡಿಸಿದ ಮಂಗಳೂರು ಪೊಲೀಸ್ ಕಮಿಷನರ್ ಡಾ.ಹರ್ಷಾರಿಂದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಭೇಟಿ…

ಕುತೂಹಲ ಮೂಡಿಸಿದ ಮಂಗಳೂರು ಪೊಲೀಸ್ ಕಮಿಷನರ್ ಡಾ.ಹರ್ಷಾರಿಂದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಭೇಟಿ…

ಮಂಗಳೂರು,ಜ,21,2020(www.justkannada.in):  ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಪತ್ತೆ ಅಣಕು ಪ್ರದರ್ಶನ  ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಟೀಕೆ ಮಾಡಿದ್ದು ಈ ಬೆನ್ನಲ್ಲೆ ಮಂಗಳೂರು ನಗರ ಪೊಲೀಸ್ ಆಯುಕ್ತ ಡಾ.ಹರ್ಷಾ ಅವರು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರನ್ನ ಭೇಟಿಯಾಗಿ ಚರ್ಚಿಸಿದ್ದಾರೆ.

ಮಂಗಳೂರಿನ ಹೊರವಲಯದ ಉಲ್ಲಾಳದ  ಬಿಎಂ ಫಾರೂಕ್ ಅವರ ನಿವಾಸದಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರನ್ನ, ಮಂಗಳೂರು ಕಮೀಷನರ್ ಡಾ.ಹರ್ಷ ಭೇಟಿಯಾಗಿ ಚರ್ಚಿಸಿದ್ದಾರೆ.  ಮಂಗಳೂರು ಕಮೀಷನರ್ ಡಾ.ಹರ್ಷ ಮತ್ತು ಕುಮಾರಸ್ವಾಮಿಯವರ ಭೀಟಿ ಇದೀಗ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

ಹೆಚ್.ಡಿ ಕುಮಾರಸ್ವಾಮಿ ಭೇಟಿ ಬಳಿಕ ಮಾಧ್ಯಮಗಳಿಗೆ ಮಾತನಾಡಿರುವ ಪೊಲೀಸ್ ಕಮಿಷನರ್ ಹರ್ಷಾ, ಇಂದು ಹೆಚ್.ಡಿ ಕುಮಾರಸ್ವಾಮಿ ಅವರನ್ನ ಭೇಟಿಯಾಗಿ ಚರ್ಚಿಸಿದ್ದೇನೆ. ಅವರ ಬಳಿ ಭದ್ರತಾ ವಿಷಯ ಬಿಟ್ಟು ಬೇರೇನು ಚರ್ಚಿಸಿಲ್ಲ ಎಂದು ಹೇಳಿದರು.

ನಿನ್ನೆ ಮಂಗಳೂರಿನ ವಿಮಾನ ನಿಲ್ದಾಣದಲ್ಲಿ ಬಾಂಬ್ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ್ದ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿಯವರು ಇದೊಂದು ಅಣಕು ಪ್ರದರ್ಶನದಂತಿತ್ತು ಎಂದು ಟೀಕಿಸಿದ್ದರು.

Key words: Mangalore -Police Commissioner -Dr Harsha –meet-Former CM -HD Kumaraswamy