Friday, August 14, 2026

BDA Apartments

Home Election News and Analysis ನಿಖಿಲ್ ಕುಮಾರಸ್ವಾಮಿ ಗೆದ್ದೇ ಗೆಲ್ಲುತ್ತಾರೆ- ವಿಶ್ವಾಸ ವ್ಯಕ್ತಪಡಿಸಿದ ಸಚಿವ ಸಾ.ರಾ.ಮಹೇಶ್

ನಿಖಿಲ್ ಕುಮಾರಸ್ವಾಮಿ ಗೆದ್ದೇ ಗೆಲ್ಲುತ್ತಾರೆ- ವಿಶ್ವಾಸ ವ್ಯಕ್ತಪಡಿಸಿದ ಸಚಿವ ಸಾ.ರಾ.ಮಹೇಶ್

ಮೈಸೂರು,ಮೇ,23,2019(www.justkannada.in):  ಮಂಡ್ಯ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಗೆದ್ದೇ ಗೆಲ್ಲುತ್ತಾರೆ ಎಂದು ಸಚಿವ ಸಾ.ರಾ ಮಹೇಶ್ ವಿಶ್ವಾಸ ವ್ಯಕ್ತಪಡಿಸಿದರು.

ಲೋಕಸಭಾ ಚುನಾವಣಾ ಫಲಿತಾಂಶದ ಹಿನ್ನೆಲೆಯಲ್ಲಿ ಅಭ್ಯರ್ಥಿಗಳು, ಬೆಂಬಲಿಗರು ದೇವಸ್ಥಾನಗಳಿಗೆ ಭೇಟಿ ನೀಡುತ್ತಿದ್ದು, ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಸಚಿವ ಸಾ.ರಾ.ಮಹೇಶ್ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ.

ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಮಾತನಾಡಿದ ಸಾ.ರಾ.ಮಹೇಶ್, ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಇದುವರೆಗೂ ಮಾಧ್ಯಮಗಳ ಸಮೀಕ್ಷೆ ಮಾತ್ರ ನೋಡಿದ್ದೇವೆ. ಇಂದು ಮಧ್ಯಾಹ್ನದ ಹೊತ್ತಿಗೆ ಜನರ ನಿಲುವೇನು ಎಂಬುದು ಗೊತ್ತಾಗಲಿದೆ. ಜತೆಗೆ ನಿಖಿಲ್ ಕುಮಾರಸ್ವಾಮಿ, ಎಚ್.ಡಿ.ದೇವೇಗೌಡ, ಮೈತ್ರಿ ಅಭ್ಯರ್ಥಿಗಳ ಗೆಲುವಿಗಾಗಿ ಪ್ರಾರ್ಥಿಸಿದ್ದೇವೆ ಎಂದು ತಿಳಿಸಿದ್ದಾರೆ.

ಜೆಡಿಎಸ್ ಅಭ್ಯರ್ಥಿಗಳ ಗೆಲುವಿಗಾಗಿ ಮತ್ತು ಎಚ್.ಡಿ.ಕುಮಾರಸ್ವಾಮಿ ಸಿಎಂ ಆಗಿ ಒಂದು ವರ್ಷವಾಗಿದ್ದು, ಸರ್ಕಾರದ ಒಳಿತಿಗಾಗಿ ಪೂಜೆ ಸಲ್ಲಿಸಿದ್ದೇವೆ ಎಂದು ಸಚಿವ ಸಾ.ರಾ.ಮಹೇಶ್ ಹೇಳಿದರು.

ನಿಖಿಲ್ ಕುಮಾರಸ್ವಾಮಿ ಗೆದ್ದೇ ಗೆಲ್ಲುತ್ತಾರೆ. ನಮ್ಮ ಲೆಕ್ಕ ಎಂದೂ ತಪ್ಪಾಗುವುದಿಲ್ಲ. ನಮ್ಮ ನಿರೀಕ್ಷೆಯಷ್ಟು ಅಭ್ಯರ್ಥಿಗಳು ಗೆಲ್ಲುತ್ತಾರೆ ಎಂದು ಸಚಿವ ಸಾ.ರಾ.ಮಹೇಶ್ ವಿಶ್ವಾಸ ವ್ಯಕ್ತಪಡಿಸಿದರು.

Key words : Nikhil Kumaraswamy  will wins-Minister SaRa Mahesh

#election #result  #MinisterSaRaMahesh