Wednesday, August 5, 2026

BDA Apartments

Home Front Page ಮೈಸೂರು ಜಿಲ್ಲೆಯ ಗ್ರಾ.ಪಂ ಸದಸ್ಯ ಸ್ಥಾನಗಳಿಗೆ ಉಪಚುನಾವಣೆ ವೇಳಾಪಟ್ಟಿ ಪ್ರಕಟ: ಫೆ.9 ರಂದು ಮತದಾನ…

ಮೈಸೂರು ಜಿಲ್ಲೆಯ ಗ್ರಾ.ಪಂ ಸದಸ್ಯ ಸ್ಥಾನಗಳಿಗೆ ಉಪಚುನಾವಣೆ ವೇಳಾಪಟ್ಟಿ ಪ್ರಕಟ: ಫೆ.9 ರಂದು ಮತದಾನ…

ಮೈಸೂರು,ಜ,23,2020(www.justkannada.in): ಮೈಸೂರು ಜಿಲ್ಲೆಯಲ್ಲಿ ವಿವಿಧ ಕಾರಣಗಳಿಂದ ತೆರವಾಗಿರುವ  ಗ್ರಾಮಪಂಚಾಯತ್  ಸದಸ್ಯ ಸ್ಥಾನಗಳಿಗೆ ಉಪಚುನಾವಣೆ ದಿನಾಂಕ ನಿಗದಿಯಾಗಿದೆ.

ಜಿಲ್ಲೆಯ 24 ಗ್ರಾಮ ಪಂಚಾಯ್ತಿಗಳಿಗೆ ಚುನಾವಣೆ ನಡೆಸಲು ಜಿಲ್ಲಾಧಿಕಾರಿ ಅಧಿಸೂಚನೆ ಹೊರಡಿಸಿದ್ದು ಜಿಲ್ಲಾ ಚುನಾವಣಾಧಿಕಾರಿ ಚುನಾವಣಾ ವೇಳಾಪಟ್ಟಿ ಪ್ರಕಟಿಸಿದ್ದಾರೆ. ಜನವರಿ. 25ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದ್ದು, ಜ. 28 ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನವಾಗಿದೆ.

ಹಾಗೆಯೇ ಜನವರಿ 29ರಂದು ನಾಮಪತ್ರಗಳನ್ನು ಪರಿಶೀಲನೆ ನಡೆಯಲಿದ್ದು ಉಮೇದುವಾರಿಕೆಗಳನ್ನು ಹಿಂತೆಗೆದುಕೊಳ್ಳಲು ಜನವರಿ 31 ಕೊನೆಯ ದಿನವಾಗಿದೆ. ಫೆಬ್ರವರಿ 09 ರಂದು ಮತದಾನ ಪ್ರಕ್ರಿಯೆ ನಡೆಯಲಿದ್ದು ಅಗತ್ಯವಿದ್ದಲ್ಲಿ ಫೆ.10 ಮರು ಮತದಾನ ನಡೆಯಲಿದೆ. ಫೆಬ್ರವರಿ 11 ರಂದು ಮತ ಏಣಿಕೆ ಮಾಡಲಾಗುತ್ತದೆ.

Key words: Published -by-election -schedule -Mysore district-gram panchayath- Voting