Tuesday, September 29, 2026

BDA Apartments

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರ ಅಹೋರಾತ್ರಿ...
Home Front Page ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರ  ಅಹೋರಾತ್ರಿ ಧರಣಿ…

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರ  ಅಹೋರಾತ್ರಿ ಧರಣಿ…

ಬೆಂಗಳೂರು,ಜ,23,2020(www.justkannada.in):  ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತಯರು ಇಂದಿನಿಂದ ಎರಡು ದಿನಗಳ ಕಾಲ ಅಹೋರಾತ್ರಿ ಕೈಗೊಳ್ಳಲಿದ್ದಾರೆ.

ಈ ಬಾರಿ ಬಜೆಟ್ ನಲ್ಲಿ ವೇತನ ಹೆಚ್ಚಳ ಸೇರಿ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ ಬಳಿ ಅಂಗನವಾಡಿ ಕಾರ್ಯಕರ್ತೆಯರು ಅಹೋರಾತ್ರಿ ಧರಣಿ ನಡೆಸಲಿದ್ದಾರೆ. ಇಂದು ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ಫ್ರೀಡಂ ಪಾರ್ಕ್ ವರೆಗೆ ಅಂಗನವಾಡಿ ಕಾರ್ಯಕರ್ತೆಯರು ಪ್ರತಿಭಟನಾ ರ್ಯಾಲಿ ನಡೆಸಲಿದ್ದಾರೆ. ಪ್ರತಿಭಟನಾ ರ್ಯಾಲಿ ಹಿನ್ನೆಲೆ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣಕ್ಕೆ ಅಂಗನವಾಡಿ ಕಾರ್ಯಕರ್ತೆಯರು ಜಮಾಯಿಸಿದ್ದಾರೆ.

ಇತ್ತೀಚೆಗೆ ಆಶಾ ಕಾರ್ಯಕರ್ತೆಯರು ಧರಣಿ ನಡೆಸಿ ವೇತನ ಹೆಚ್ಚಳ ಸೇರಿ ತಮ್ಮ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿದ್ದರು. ಹಾಗಯೇ ಕಳೆದ ಎರಡು ದಿನಗಳ ಹಿಂದೆ ಬಿಸಿಯೂಟ ತಯಾರಿಕಾ ಕಾರ್ಯಕರ್ತೆಯರು ಸಹ ಪ್ರತಿಭಟನೆ ನಡೆಸಿದ್ದರು. ಇದೀಗ ಅಂಗನವಾಡಿ ಕಾರ್ಯಕರ್ತೆಯರು ವೇತನ ಹೆಚ್ಚಳಕ್ಕೆ ಆಗ್ರಹಿಸಿ ಬೀದಿಗಿಳಿದಿದ್ದಾರೆ.

Key words: Bangalore- anganavadi activist- rally -demanding -various demands