Tuesday, August 11, 2026

BDA Apartments

Home Front Page ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೇಳಿಲ್ಲ: ಯಾವುದೇ ಜವಾಬ್ದಾರಿ ಕೊಟ್ಟರೂ ನಿಭಾಯಿಸಲು ಸಿದ್ಧ- ಮಾಜಿ ಸಚಿವ ಸಿತೀಶ್...

ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೇಳಿಲ್ಲ: ಯಾವುದೇ ಜವಾಬ್ದಾರಿ ಕೊಟ್ಟರೂ ನಿಭಾಯಿಸಲು ಸಿದ್ಧ- ಮಾಜಿ ಸಚಿವ ಸಿತೀಶ್ ಜಾರಕಿಹೊಳಿ…

ಬೆಳಗಾವಿ,ಜ,23,2020(www.justkannada.in):  ಕೆಪಿಸಿಸಿ ಅಧ್ಯಕ್ಷ ಸ್ಥಾನವನ್ನ ನಾನು ಕೇಳಿಲ್ಲ. ನನಗೆ ಯಾವುದೇ ಜವಾಬ್ದಾರಿ ಕೊಟ್ಟರೂ ನಿಭಾಯಿಸುತ್ತೇನೆ ಎಂದು ಮಾಜಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.

ಬೆಳಗಾವಿಯಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಮಾಜಿ ಸಚಿವ ಸತೀಶ್ ಜಾರಕಿಹೊಳಿ, ದೆಹಲಿ ಚುನಾವಣೆ ಬಳಿಕ ಕೆಪಿಸಿಸಿ ಅಧ್ಯಕ್ಷರ ನೇಮಕವಾಗಬಹುದು. ನಾನು ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೊಡಿ ಎಂದು ಕೇಳಿಲ್ಲ. ಯಾವುದೇ ಜವಾಬ್ದಾರಿ ನೀಡಿದರೂ ಸಮರ್ಥವಾಗಿ ನಿಭಾಯಿಸುತ್ತೇನೆ ಎಂದರು.

ಮಂಗಳೂರು ಬಾಂಬ್ ಪತ್ತೆ ಪ್ರಕರಣ ಕುರಿತು ಆರೋಪಿ ಮಾನಸಿಕ ಅಸ್ವಸ್ಥ ಎಂದು ಹೇಳಿಕೆ ನೀಡಿದ್ದ ಗೃಹಸಚಿವ ಬಸವರಾಜ ಬೊಮ್ಮಾಯಿಗೆ ತಿರುಗೇಟು ನೀಡಿದ ಸತೀಶ್ ಜಾರಕಿಹೊಳಿ, ಆರೋಪಿ ಸಿಗುವ ಮುನ್ನ ದೊಡ್ಡ ವಿಚಾರ ಮಾಡಿದ್ದರು. ಈಗ ತಮ್ಮವರೇ ಆಗಿದ್ದರಿಂದ ತಿರುಚುತ್ತಿದ್ದಾರೆ. ಆರೋಪಿ ಮಾನಸಿಕ ಅಸ್ವಸ್ಥ ಎಂದು ಹೇಳಿಕೆ ನೀಡಿದ್ದು ಸರಿಯಲ್ಲ.  ಯಾವುದೇ ಜಾತಿ,ಧರ್ಮಕ್ಕೆ ಸೇರಿದರೂ ಆತ ದೇಶದ್ರೋಹಿ. ಈ ವಿಚಾರದಲ್ಲಿ ಯಾವುದೇ ಪಕ್ಷ ಸಮರ್ಥಿಸಿಕೊಳ್ಳಬಾರದು. ಈ ಬಗ್ಗೆ ತನಿಖೆಯಾಗಲಿ ಎಂದು ಆಗ್ರಹಿಸಿದರು.

Key words: KPCC president –position-any responsibility-Former Minister -Sithish jarakiholi.