Saturday, August 1, 2026

BDA Apartments

Home Election News and Analysis ಶಿವಮೊಗ್ಗದಲ್ಲಿ ಬಿಜೆಪಿ ಅಭ್ಯರ್ಥಿ ಬಿವೈ ರಾಘವೇಂದ್ರಗೆ ಬಾರಿ ಮುನ್ನಡೆ: ತುಮಕೂರಿನಲ್ಲಿ ಹೆಚ್.ಡಿಡಿಗೆ ಹಿನ್ನಡೆ…

ಶಿವಮೊಗ್ಗದಲ್ಲಿ ಬಿಜೆಪಿ ಅಭ್ಯರ್ಥಿ ಬಿವೈ ರಾಘವೇಂದ್ರಗೆ ಬಾರಿ ಮುನ್ನಡೆ: ತುಮಕೂರಿನಲ್ಲಿ ಹೆಚ್.ಡಿಡಿಗೆ ಹಿನ್ನಡೆ…

ಶಿವಮೊಗ್ಗ,ಮೇ,23,2019(www.justkannada.in): ಶಿವಮೊಗ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಿವೈ ರಾಘವೇಂದ್ರ ಮೈತ್ರಿ ಅಭ್ಯರ್ಥಿ ಮಧು ಬಂಗಾರಪ್ಪ ವಿರುದ್ದ ಬಾರಿ ಮುನ್ನಡೆ ಸಾಧಿಸಿದ್ದಾರೆ.

ಶಿವಮೊಗ್ಗದಲ್ಲಿ ಬಿವೈ ರಾಘವೇಂದ್ರ 90 ಸಾವಿರ ಮತಗಳ ಮುನ್ನಡೆ ಸಾಧಿಸಿದ್ದಾರೆ.  ತುಮಕೂರು ಕ್ಷೇತ್ರದಲ್ಲಿ  ಮೈತ್ರಿ ಅಭ್ಯರ್ಥಿ ಹೆಚ್.ಡಿ ದೇವೇಗೌಡರು ಬಾರಿ ಹಿನ್ನಡೆ ಅನುಭವಿಸಿದ್ದಾರೆ. ಹೆಚ್.ಡಿ ದೇವೇಗೌಡರು9 ಸಾವಿರ ಮತಗಳ ಹಿನ್ನಡೆ ಅನುಭವಿಸಿದ್ದಾರೆ.

ಮಂಡ್ಯದಲ್ಲಿ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಹಾಗೂ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ನಡುವೆ ಬಿಗ್ ಫೈಟ್ ನಡೆಯುತ್ತಿದ್ದು ಮಂಡ್ಯ ಫಲಿತಾಂಶ ಹಾವು ಏಣಿಯಾಟದಂತಾಗಿದೆ.  ಕಲ್ಬುರ್ಗಿಯಲ್ಲಿ ಮೈತ್ರಿ ಅಭ್ಯರ್ಥಿ ಮಲ್ಲಿಕಾರ್ಜುನ ಖರ್ಗೆ ವಿರುದ್ದ ಬಿಜೆಪಿ ಅಭ್ಯರ್ಥಿ ಉಮೇಶ್ ಜಾಧವ್  21 ಸಾವಿರ ಮತಗಳ ಅಂತರದಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ.

Key words: BJP’s candidate BY Raghavendra has been a leading in Shimoga..

#election2019 #result