Friday, August 14, 2026

BDA Apartments

Home Front Page ನಿಮ್ಮ ಜೀನ್ ಪಾಕಿಸ್ತಾನದಲ್ಲಿರಬಹುದು: ನಮ್ಮ ಜೀನ್ ಈ ಮಣ್ಣನಲ್ಲಿದೆ- ಸರಣಿ ಟ್ವೀಟ್ ಮಾಡಿ ಬಿಜೆಪಿ ನಾಯಕರಿಗೆ...

ನಿಮ್ಮ ಜೀನ್ ಪಾಕಿಸ್ತಾನದಲ್ಲಿರಬಹುದು: ನಮ್ಮ ಜೀನ್ ಈ ಮಣ್ಣನಲ್ಲಿದೆ- ಸರಣಿ ಟ್ವೀಟ್ ಮಾಡಿ ಬಿಜೆಪಿ ನಾಯಕರಿಗೆ ಎಚ್ಚರಿಕೆ ನೀಡಿದ ಮಾಜಿ ಸಿಎಂ  ಹೆಚ್.ಡಿಕೆ…

ಬೆಂಗಳೂರು,ಜ,25,2020(www.justkannada.in): ಮಾಜಿ ಸಿಎಂ ಕುಮಾರಸ್ವಾಮಿಗೆ ಪಾಕ್ ಮೇಲೆ ಪ್ರೀತಿ ಬೆಳೆದಿದೆ. ಹೀಗಾಗಿ ಪಾಕ್ ಮೇಲೆ ಪ್ರೀತಿಯಿರುವ ಕುಮಾರಸ್ವಾಮಿ ದೇಶ ಬಿಟ್ಟು ತೊಲಗಲಿ ಎಂದು ವಾಗ್ದಾಳಿ ನಡೆಸಿದ್ದ  ಆರೋಗ್ಯ ಸಚಿವ ಶ್ರೀರಾಮುಲು  ಮತ್ತು ಬಿಜೆಪಿ ನಾಯಕರ ವಿರುದ್ದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಟ್ವಿಟ್ಟರ್ ನಲ್ಲಿ ಗುಡಗಿದ್ದಾರೆ.

ನನ್ನನ್ನು ಅಪಮಾನಿಸುತ್ತಿರುವ ಬಿಜೆಪಿಗರೇ ಎಚ್ಚರ… ನಿಮ್ಮ ಜೀನ್ ಗಳು ಪಾಕಿಸ್ತಾನದಲ್ಲಿರಬಹುದು. ಅಥವಾ ಜರ್ಮನಿಯ ನಾಜಿಗಳಲ್ಲಿರಬಹುದು. ನನ್ನ‌ ಜೀನ್ ಈ ಮಣ್ಣಿನಲ್ಲಿದೆ. ನನ್ನನ್ನು ಕೊಲ್ಲಲೆತ್ನಿಸುವವರು ನವ ಉಗ್ರರು. ಅಪಮಾನಿಸಲು ಯತ್ನಿಸುತ್ತಿರುವವರು ಒಕ್ಕಲಿಗ ಅಸ್ಮಿತೆಯ ವಿರೋಧಿಗಳು ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹರಿಹಾಯ್ದಿದ್ದಾರೆ.

ತಮ್ಮನ್ನ ಕೊಲ್ಲಲು ಸಂಚು ರೂಪಿಸಿದ ಬಗ್ಗೆ ಬೆದರಿಕೆ ಪತ್ರ ಬಂದಿರುವ ಕುರಿತು ಟ್ವಿಟ್ಟರ್ ನಲ್ಲಿ ಟ್ವೀಟ್ ಮಾಡಿರುವ ಹೆಚ್.ಡಿ ಕುಮಾರಸ್ವಾಮಿ, “ಸಮಾಜದ ಶಾಂತಿಗಾಗಿ ಹೋರಾಡಿದ್ದಕ್ಕೆ ನನ್ನನ್ನು ಕೊಲ್ಲುವ ಸಂಚು ನಡೆಯುತ್ತಿದೆಯಂತೆ. ನನ್ನನ್ನು ಕೊಲ್ಲಿಸುವ ಕೆಲಸಕ್ಕೆ ಕೈಹಾಕಿದವರೇ ಒಂದು ವಿಚಾರ ತಿಳಿದುಕೊಳ್ಳಿ. ನನ್ನಂತೆ ಹೋರಾಡಬಲ್ಲ ಲಕ್ಷಾಂತರ ಕಾರ್ಯಕರ್ತರು, ಅಭಿಮಾನಿಗಳ ಪಡೆ ನನ್ನ ಬೆನ್ನಿಗಿದೆ. ನನ್ನನ್ನು ಕೊಲ್ಲಬಹುದು. ಆದರೆ ನನ್ನ ಬೆನ್ನಿಗೆ ನಿಂತವರನ್ನು ಕೊಲ್ಲಲಾದೀತೆ?” ಎಂದು ಪ್ರಶ್ನಿಸಿದ್ದಾರೆ.

ಮತ್ತೊಂದು ಟ್ವಿಟ್ಟರ್ ನಲ್ಲಿ ‘ಒಕ್ಕಲಿಗ ಒಕ್ಕದಿದ್ದರೆ ಬಿಕ್ಕುವುದು ಜಗತ್ತು” ಎಂಬ ಕವಿವಾಣಿ ನೆನಪಿರಲಿ. ಅವರ ಪ್ರತಿನಿಧಿ ನಾನು. ರೈತರಿಗಾಗಿ ಕಾರ್ಯಕ್ರಮ ಹಮ್ಮಿಕೊಂಡವ ನಾನು. ನೀವು ನನ್ನನ್ನು ಕೊಲ್ಲಲಾದೀತೇ? ನನ್ನನ್ನು ಪಾಕಿಸ್ತಾನಿ ಎನ್ನುವಿರೇ? ಮುಂದೊಂದು ದಿನ ಪ್ರಾಯಶ್ಚಿತಪಡಲೆಂದೇ ಇಂದು ನೀವು ಮಾಡಿಕೊಳ್ಳುತ್ತಿರುವ ಪಾಪಗಳಿವು ಎಂದು ಟೀಕಿಸಿದ್ದಾರೆ.

ಹಾಗೆಯೇ ಒಕ್ಕಲಿಗರು ಹೋರಾಟಕ್ಕಿಳಿದರೆ, ಅಧಿಕಾರಕ್ಕೆ ಬಂದರೆ ಅವರನ್ನು ಬೆದರಿಸುವ, ಸರ್ಕಾರಗಳನ್ನು ಬೀಳಿಸುವ ಕಾಯಕ ಹಿಂದಿನಿಂದ ನಡೆದುಕೊಂಡು ಬಂದಿದೆ. ದೇವೇಗೌಡರಂಥವರ ಮೇಲೇ ಹಲ್ಲೆ ಪ್ರಯತ್ನಗಳು ನಡೆದಿವೆ. ಅವರಿಗೆ ಅಧಿಕಾರ ವಂಚಿಸಲು ಯತ್ನಿಸಿದ್ದನ್ನು ಸಮಾಜ ನೋಡಿದೆ. ಈಗ ಈ ಶಕ್ತಿಗಳು ನನ್ನ ವಿರುದ್ಧ ನಿಂತಿವೆ. ಇದಕ್ಕೆ ಬೆದರುವ ವ್ಯಕ್ತಿ ನಾನಲ್ಲ  ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಮತ್ತೊಂದು ಟ್ವಿಟ್ಟರ್ ನಲ್ಲಿ ಗುಡುಗಿದ್ದಾರೆ.

Key words: Pakistan-warned- bjp leader-Former CM HD kumaraswamy – tweet