Wednesday, August 19, 2026

BDA Apartments

Home Front Page ವಾರಾಣಾಸಿಯಲ್ಲಿ ಪ್ರಧಾನಿ ಮೋದಿ; ಗಾಂಧೀನಗರದಲ್ಲಿ ಅಮಿತ್ ಶಾಗೆ ಭರ್ಜರಿ ಗೆಲುವು: ಏಕಾಂಗಿಯಾಗಿ ಮ್ಯಾಜಿಕ್ ಸಂಖ್ಯೆಯನ್ನು ದಾಟಿದ...

ವಾರಾಣಾಸಿಯಲ್ಲಿ ಪ್ರಧಾನಿ ಮೋದಿ; ಗಾಂಧೀನಗರದಲ್ಲಿ ಅಮಿತ್ ಶಾಗೆ ಭರ್ಜರಿ ಗೆಲುವು: ಏಕಾಂಗಿಯಾಗಿ ಮ್ಯಾಜಿಕ್ ಸಂಖ್ಯೆಯನ್ನು ದಾಟಿದ ಬಿಜೆಪಿ

ನವದೆಹಲಿ:ಮೇ-23(www.justkannada.in) ಲೋಕಸಭಾ ಚುನಾವಣೆ ಮತಎಣಿಕೆ ಕಾರ್ಯ ಬಿರುಸಿನಿಂದ ಸಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಉಭಯ ನಾಯಕರೂ ಭರ್ಜರಿ ಗೆಲುವು ಸಾಧಿಸಿದ್ದಾರೆ.

ವಾರಣಾಸಿಯಲ್ಲಿ ಪ್ರಧಾನಿ ಮೋದಿ ಹಾಗೂ ಗಾಂಧೀನಗರದಲ್ಲಿ ಅಮಿತ್ ಶಾ ಗೆಲುವು ಸಾಧಿಸಿದ್ದು, ಅಧಿಕೃತ ಘೋಷಣೆ ಮಾತ್ರ ಬಾಕಿಯಿದೆ.

ವಾರಾಣಾಸಿಯಲ್ಲಿ ಪ್ರಧಾನಿ ನರೇಂದ್ರ ಮೋದಿ 1.20 ಲಕ್ಷ ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ. ಬಿಜೆಪಿ ಭೀಷ್ಮ ಎಲ್ ಕೆ ಅಡ್ವಾಣಿ ಪ್ರತಿನಿಧಿಸುತ್ತಿದ್ದ ಗುಜರಾತ್ ನ ಗಾಂಧೀನಗರ ಕ್ಷೆತ್ರದಿಂದ ಈಬಾರಿ ಕಣಕ್ಕಿಳಿದಿರುವ ಅಮಿತ್ ಶಾ 25 ಸಾವಿರ ಮತಗಳ ಅಂತರದಿಂದ ಮುನ್ನಡೆಯಲ್ಲಿದ್ದಾರೆ.

ಈಗಾಗಲೇ ಎನ್ ಡಿ ಎ 343 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದೆ. ಯುಪಿಎ 90 ಹಾಗೂ ಇತರರು 109 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದೆ.

ಇನ್ನು ಬಿಜೆಪಿ ಈಗಾಗಲೇ ಏಕಾಂಗಿಯಾಗಿ ಮ್ಯಾಜಿಕ್ ಸಂಖ್ಯೆಯನ್ನೂ ಮೀರಿ ಮುಂದೆ ಸಾಗಿದೆ. ಮ್ಯಾಜಿಕ್ ಸಂಖ್ಯೆ 272. ಬಿಜೆಪಿ 287 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.

ವಾರಾಣಾಸಿಯಲ್ಲಿ ಪ್ರಧಾನಿ ಮೋದಿ; ಗಾಂಧೀನಗರದಲ್ಲಿ ಅಮಿತ್ ಶಾಗೆ ಭರ್ಜರಿ ಗೆಲುವು: ಏಕಾಂಗಿಯಾಗಿ ಮ್ಯಾಜಿಕ್ ಸಂಖ್ಯೆಯನ್ನು ದಾಟಿದ ಬಿಜೆಪಿ

Loka sabha election-2019,PM Modi,Amith shah,Magic No,BJP