Wednesday, September 30, 2026

BDA Apartments

ನಾನು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಅರ್ಜಿ ಹಾಕಿಲ್ಲ: ಸದ್ಯ ದಿನೇಶ್ ಗುಂಡೂರ...
Home Front Page ನಾನು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಅರ್ಜಿ ಹಾಕಿಲ್ಲ: ಸದ್ಯ ದಿನೇಶ್ ಗುಂಡೂರಾವ್ ನಮ್ಮ ನಾಯಕರು- ಮಾಜಿ ಸಚಿವ...

ನಾನು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಅರ್ಜಿ ಹಾಕಿಲ್ಲ: ಸದ್ಯ ದಿನೇಶ್ ಗುಂಡೂರಾವ್ ನಮ್ಮ ನಾಯಕರು- ಮಾಜಿ ಸಚಿವ ಡಿಕೆ ಶಿವಕುಮಾರ್ ಹೇಳಿಕೆ…

ಕಲ್ಬುರ್ಗಿ,ಜ,29,2020(www.justkannada.in): ನಾನು ಕೆಪಿಸಿಸಿ ಅಧ್ಯಕ್ಷಸ್ಥಾನದ ಆಕಾಂಕ್ಷಿಯೂ ಅಲ್ಲ. ಅಧ್ಯಕ್ಷ ಸ್ಥಾನಕ್ಕೆ ಅರ್ಜಿಯನ್ನ ಹಾಕಿಲ್ಲ. ಸದ್ಯ ದಿನೇಶ್ ಗುಂಡೂರಾವ್ ನಮ್ಮ ನಾಯಕರು ಎಂದು ಮಾಜಿ ಸಚಿವ ಡಿ.ಕೆ ಶಿವಕುಮಾರ್ ತಿಳಿಸಿದರು.

ಕಲ್ಬುರ್ಗಿಯಲ್ಲಿ ಇಂದು ಮಾತನಾಡಿದ ಮಾಜಿ ಸಚಿವ ಡಿ.ಕೆ ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷ ಸ್ಥಾನ ಖಾಲಿ ಇಲ್ಲ.  ದಿನೇಶ್ ಗುಂಡೂರಾವ್ ಅವರ ರಾಜೀನಾಮೆ ಅಂಗೀಕಾರವಾಗಿಲ್ಲ. ಸದ್ಯ ದಿನೇಶ್ ಗುಂಡೂರಾವ್ ಕೆಪಿಸಿಸಿ ಅಧ್ಯಕ್ಷರಾಗಿದ್ದಾರೆ. ನಾನು ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಲ್ಲ. ನಾನು ಯಾವುದೇ ಹುದ್ದೆ ಕೇಳಿಲ್ಲ. ಕೆಪಿಸಿಸಿ ಅಧ್ಯಕ್ಷ ಸ್ಥಾನವನ್ನೇ ಕೇಳಿಲ್ಲ. ಕೇಳಿದ್ರೆ ತಾನೇ ಅಡ್ಡಗಾಲು ಹಾಕೋದು ಎಂದು ಹೇಳಿದರು.

ಸದ್ಯ ದಿನೇಶ್ ಗುಂಡೂರಾವ್ ನಮ್ಮ ನಾಯಕರು. ದಿನೇಶ್ ಗುಂಡೂರಾವ್ ಹೇಳಿದಂತೆ ಕೇಳುತ್ತೇನೆ ಎಂದು ಡಿ.ಕೆ ಶಿವಕುಮಾರ್ ತಿಳಿಸಿದರು. ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಡಿ.ಕೆ ಶಿವಕುಮಾರ್ ಪ್ರಬಲ ಆಕಾಂಕ್ಷಿಯಾಗಿದ್ದು ಅಧ್ಯಕ್ಷ ಸ್ಥಾನ ಗಿಟ್ಟಿಸಿಕೊಳ್ಳಲು ಸಾಕಷ್ಟು ಕಸರತ್ತು ನಡೆಸುತ್ತಿದ್ದಾರೆ ಎನ್ನಲಾಗಿತ್ತು.

Key words: not- position – KPCC President-Dinesh Gundurao – former Minister -DK Sivakumar