Sunday, September 20, 2026

BDA Apartments

ಜಮ್ಮುಕಾಶ್ಮೀರ ಮತ್ತು ಲಡಾಖ್ ಗೆ ಅನುದಾನ ಮೀಸಲಿಟ್ಟ ಕೇಂದ್ರ ಸರ್ಕಾರ… BDA JK_Adv BDA Adv
Home Front Page ಜಮ್ಮುಕಾಶ್ಮೀರ ಮತ್ತು ಲಡಾಖ್ ಗೆ  ಅನುದಾನ ಮೀಸಲಿಟ್ಟ ಕೇಂದ್ರ ಸರ್ಕಾರ…

ಜಮ್ಮುಕಾಶ್ಮೀರ ಮತ್ತು ಲಡಾಖ್ ಗೆ  ಅನುದಾನ ಮೀಸಲಿಟ್ಟ ಕೇಂದ್ರ ಸರ್ಕಾರ…

ನವದೆಹಲಿ,ಫೆ,1,2020(www.justkannada.in):  ಇಂದು ಮಂಡನೆಯಾದ ಕೇಂದ್ರ ಬಜೆಟ್ ನಲ್ಲಿ  ನೂತನ ಕೇಂದ್ರಾಡಳಿತ ಪ್ರದೇಶ ಲಡಾಖ್ ಗೆ ಕೇಂದ್ರ ಸರ್ಕಾರ ವಿಶೇಷ ಅನುದಾನ ಘೋಷಣೆ ಮಾಡಿದೆ.

ಜಮ್ಮು ಕಾಶ್ಮೀರಕ್ಕೆ 30,757 ಕೋಟಿ,ರೂ. ಹಾಗೂ ಲಡಾಕ್ ಅಭಿವೃದ್ದಿಗೆ 5,958 ಕೋಟಿ ರೂ  ಅನುದಾನ ಮೀಸಲಿಡಲಾಗಿದೆ. ಜಮ್ಮು ಕಾಶ್ಮೀರ ಅಭಿವೃದ್ದಿಗೆ ಕೇಂದ್ರ ಸರ್ಕಾರ ಬದ್ಧ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡನೆ ವೇಳೆ ತಿಳಿಸಿದರು.

ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸುವ 370ನೇ ವಿಧಿ ರದ್ದುಪಡಿಸಿದ ಬಳಿಕ ಜಮ್ಮುಕಾಶ್ಮೀರ ಮತ್ತು ಲಡಾಖ್ ಅನ್ನ ನೂತನ ಕೇಂದ್ರಾಡಳಿತ ಪ್ರದೇಶ ಎಂದು ಘೋಷಿಸಲಾಗಿತ್ತು.  ಜಮ್ಮು ಕಾಶ್ಮೀರ ಹಾಗೂ ಲಡಾಖ್ ಕೇಂದ್ರಾಡಳಿತ ಪ್ರದೇಶವಾದ ಮೇಲೆ ಇದೇ ಮೊದಲ ಬಾರಿಗೆ ಬಜೆಟ್‌ನಲ್ಲಿ ಹಣ ಮೀಸಲಿಡಲಾಗಿದೆ.

Key words: budget-central government – grants – Jammu and Kashmir -Ladakh.