Tuesday, August 4, 2026

BDA Apartments

Home Front Page ಬೇಸಿಗೆ ಬೆಳೆಗೆ ನೀರು ಬಿಡುವಂತೆ ಆಗ್ರಹ: ಅಧಿಕಾರಿಗಳಿಗೆ ರಾಜ್ಯ ರೈತ ಸಂಘಗಳ ಒಕ್ಕೂಟದಿಂದ ಮನವಿ ಸಲ್ಲಿಕೆ…

ಬೇಸಿಗೆ ಬೆಳೆಗೆ ನೀರು ಬಿಡುವಂತೆ ಆಗ್ರಹ: ಅಧಿಕಾರಿಗಳಿಗೆ ರಾಜ್ಯ ರೈತ ಸಂಘಗಳ ಒಕ್ಕೂಟದಿಂದ ಮನವಿ ಸಲ್ಲಿಕೆ…

ಮೈಸೂರು,ಫೆ,5,2020(www.justkannada.in):  ಬೇಸಿಗೆ ಬೆಳೆಗೆ ನೀರು ಬಿಡುವಂತೆ ರಾಜ್ಯ ರೈತ ಸಂಘಗಳ ಒಕ್ಕೂಟದ ಸದಸ್ಯರು ಇಂದು ಕಾವೇರಿ ಹಾಗೂ ಕಬಿನಿ ನಿರಾವರಿ ನಿಗಮದ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಕಾವೇರಿ ಹಾಗೂ ಕಬಿನಿ ಅಚ್ಚುಕಟ್ಟು‌ ನಾಲೆಗಳಿಗೆ ನೀರು ಹರಿಸುವಂತೆ ರಾಜ್ಯ ಕಬ್ಬುಬೆಳೆಗಾರರ ಸಂಘ ಆಗ್ರಹಿಸಿದ್ದು, ಈ ನಡುವೆ ಇಂದು ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ಮೈಸೂರಿನ ಕಾಡಾ ಕಚೇರಿಯಲ್ಲಿ ಕಾವೇರಿ ಹಾಗೂ ಕಬಿನಿ ನಿರಾವರಿ ನಿಗಮದ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು.

ಕಬಿನಿ ಜಲಾಶಯದ ಎಡದಂಡೆ, ಬಲದಂಡೆ ನಾಲೆ, ರಾಂಪುರ ನಾಲೆ, ಹುಲ್ಲಹಳ್ಳಿ ನಾಲೆ. ವರುಣಾ ನಾಲೆ, ಚಿಕ್ಕದೇವರಾಜ ನಾಲೆ. ವಿಸಿ ನಾಲೆಗಳಿಗೆ ನೀರು ಹರಿಸುವಂತೆ ರೈತ ಮುಖಂಡರು ಮನವಿ ಮಾಡಿದರು. ಕೆರೆ ಕಟ್ಟೆಗಳು ಹಾಗೂ ಜನ ಜಾನುವಾರುಗಳಿಗೆ ಕುಡಿಯುವ ನೀರಿನ ಅನುಕೂಲ ಮಾಡುವಂತೆ ಈ ವೇಳೆ ಒತ್ತಾಯಿಸಿದರು.

Key words: leave- water – summer crop-mysore-cada office-request – State Farmers’ Union