Sunday, September 20, 2026

BDA Apartments

ಬೆಂಗಳೂರಲ್ಲಿ ಅದ್ದೂರಿಯಾಗಿ ನಡೆದ ನಿಖಿಲ್-ರೇವತಿ ನಿಶ್ಚಿತಾರ್ಥ BDA JK_Adv BDA Adv
Home Cinema ಬೆಂಗಳೂರಲ್ಲಿ ಅದ್ದೂರಿಯಾಗಿ ನಡೆದ ನಿಖಿಲ್-ರೇವತಿ ನಿಶ್ಚಿತಾರ್ಥ

ಬೆಂಗಳೂರಲ್ಲಿ ಅದ್ದೂರಿಯಾಗಿ ನಡೆದ ನಿಖಿಲ್-ರೇವತಿ ನಿಶ್ಚಿತಾರ್ಥ

ಬೆಂಗಳೂರು , ಫೆಬ್ರವರಿ 10, 2020 (www.justkannada.in): ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮತ್ತು ಶಾಸಕಿ ಅನಿತಾ ಕುಮಾರಸ್ವಾಮಿ ಪುತ್ರ, ನಟ ನಿಖಿಲ್‍ಕುಮಾರಸ್ವಾಮಿ ಅವರ ವಿವಾಹದ ನಿಶ್ಚಿತಾರ್ಥ ಇಂದು ಖಾಸಗಿ ಹೊಟೇಲ್‍ನಲ್ಲಿ ಅದ್ಧೂರಿಯಾಗಿ ನೆರವೇರಿತು.

ಮಾಜಿ ಸಚಿವ ಎಂ.ಕೃಷ್ಣಪ್ಪ ಅವರ ಸಹೋದರನ ಮೊಮ್ಮಗಳಾದ ರೇವತಿ ಅವರೊಂದಿಗೆ ನಿಖಿಲ್‍ಕುಮಾರಸ್ವಾಮಿ ವಿವಾಹದ ನಿಶ್ಚಿತಾರ್ಥವು ಎರಡೂ ಕುಟುಂಬಗಳ ಬಂಧು-ಬಳಗ ಹಾಗೂ ಹಿರಿಯರ ಸಮ್ಮುಖದಲ್ಲಿ ನೆರವೇರಿತು. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಮಾಜಿ ಸಚಿವ ಎಚ್.ಡಿ.ರೇವಣ್ಣ ಸೇರಿದಂತೆ ಕುಟುಂಬದ ಸದಸ್ಯರು ನಿಶ್ಚಿತಾರ್ಥದಲ್ಲಿ ಭಾಗವಹಿಸಿದ್ದರು.

ವಿವಿಧ ಪಕ್ಷಗಳ ರಾಜಕೀಯ ನಾಯಕರು, ಮುಖಂಡರು, ಚಲನಚಿತ್ರರಂಗದ ಗಣ್ಯರು, ಉಭಯ ಕುಟುಂಬಗಳ ಬಂಧುಗಳು, ಹಿತೈಷಿಗಳು ನಿಶ್ಚಿತಾರ್ಥಕ್ಕೆ ಆಗಮಿಸಿ ನಿಖಿಲ್ ಹಾಗೂ ರೇವತಿ ಅವರಿಗೆ ಶುಭ ಹಾರೈಸಿದರು.