Tuesday, September 22, 2026

BDA Apartments

ಮೈಸೂರಿನಲ್ಲಿ ಇಬ್ಬರು ನಕಲಿ ವೈದ್ಯರ ಬಂಧನ… BDA JK_Adv BDA Adv
Home Crime ಮೈಸೂರಿನಲ್ಲಿ ಇಬ್ಬರು ನಕಲಿ ವೈದ್ಯರ ಬಂಧನ….

ಮೈಸೂರಿನಲ್ಲಿ ಇಬ್ಬರು ನಕಲಿ ವೈದ್ಯರ ಬಂಧನ….

ಮೈಸೂರು,ಫೆ,13,2020(www.justkannada.in): ರೋಗಿಗಳ ಜೀವದ ಜೊತೆ ಚೆಲ್ಲಾಟವಾಡುತ್ತಿದ್ದ ನಕಲಿ ವೈದ್ಯರನ್ನ ಮೈಸೂರಿನ ಇಲವಾಲ ಠಾಣಾ ಪೊಲೀಸರು ಬಂಧಿಸಿದ್ದಾರೆ.

ವಿಜಯ್ ಕುಮಾರ್, ದೇವೇಂದ್ರ ಬಂಧಿತ ನಕಲಿ ವೈದ್ಯರು.  ಇಲವಾಲ ಠಾಣಾ ಪೊಲೀಸರ ಸಹಾಯದಿಂದ ಡಿಎಚ್ಓ ವೆಂಕಟೇಶ್ ನೇತೃತ್ವದಲ್ಲಿ ದಾಳಿ ನಡೆಸಿ ಇಬ್ಬರು ನಕಲಿ ವೈದ್ಯರನ್ನ ಬಂಧಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಬಂಧಿತ ಇಬ್ಬರು ನಕಲಿ ವೈದ್ಯಕೀಯ ಪ್ರಮಾಣಪತ್ರದಲ್ಲಿ ಕ್ಲಿನಿಕ್ ನಡೆಸುತ್ತಿದ್ದರು. ರೋಗಿಗಳ ಜೀವದ ಜೊತೆ ಚೆಲ್ಲಾಟವಾಡುತ್ತಿದ್ದರು ಎನ್ನಲಾಗಿದೆ. ಈ ಕುರಿತು ಮಾಹಿತಿ ಪಡೆದು ದಾಳಿ ನಡೆಸಿ ಇಬ್ಬರು ನಕಲಿ ವೈದ್ಯರನ್ನ ಬಂಧಿಸಲಾಗಿದೆ.  ಸ್ಥಳಕ್ಕೆ ಇಲವಾಲ ಪೊಲೀಸರು ಭೇಟಿ ನೀಡಿ ಪರಿಶೀಲನೆ  ನಡೆಸಿ ಬಳಿಕ ಕ್ಲಿನಿಕ್ ಗೆ ಬೀಗ ಜಡಿದಿದ್ದಾರೆ.

Key words: Arrest -two -fake- doctors – Mysore