Tuesday, August 4, 2026

BDA Apartments

Home Front Page ದೆಹಲಿ ಹಿಂಸಾಚಾರ ಖಂಡಿಸಿ ಬೆಂಗಳೂರಿನಲ್ಲಿ ಪ್ರತಿಭಟನೆ: ರಾಜಭವನಕ್ಕೆ ಮುತ್ತಿಗೆ ಹಾಕಲು ಯತ್ನ….

ದೆಹಲಿ ಹಿಂಸಾಚಾರ ಖಂಡಿಸಿ ಬೆಂಗಳೂರಿನಲ್ಲಿ ಪ್ರತಿಭಟನೆ: ರಾಜಭವನಕ್ಕೆ ಮುತ್ತಿಗೆ ಹಾಕಲು ಯತ್ನ….

ಬೆಂಗಳೂರು,ಫೆ,27,2020(www.justkannada.in):  ದೆಹಲಿಯಲ್ಲಿ ನಡೆದ ಹಿಂಸಾಚಾರವನ್ನ ಖಂಡಿಸಿ ಬೆಂಗಳೂರಿನಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದು ರಾಜಭವನಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.

ದೆಹಲಿಯಲ್ಲಿ ನಡೆದ ಹಿಂಸಾಚಾರವನ್ನ ಖಂಡಿಸಿ ಕ್ಯಾಂಪಸ್ ಫ್ರಂಟ್ ಇಂಡಿಯಾ ಸಂಘಟನೆ ವತಿಯಿಂದ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಇದೇ ವೇಳೆ ರಾಜಭವನಕ್ಕೆ ಮುತ್ತಿಗೆ ಹಾಕಲು ಪ್ರತಿಭಟನಾಕಾರರು ಯತ್ನಿಸಿದ್ದು. ಈ ಸಮಯದಲ್ಲಿ ಅವರನ್ನ ಪೊಲೀಸರು ತಡೆದಿದ್ದಾರೆ. ಇನ್ನು ಇದೇ ಸಂದರ್ಭದಲ್ಲಿ ಪೊಲೀಸರು ಮತ್ತು ಧರಣಿನಿರತರ ನಡುವೆ ಮಾತಿನ ಚಕಮಕಿ ನಡೆದಿದೆ.

ರಾಜಭವನಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಪ್ರತಿಭಟನಾಕಾರರನ್ನ ಪೊಲೀಸರು ಅಲ್ಲಿಯೇ ತಡೆದು ವಶಕ್ಕೆ ಪಡೆದಿದ್ದಾರೆ. ಈ ವೇಳೆ ರಸ್ತೆಯಲ್ಲಿ ಕುಳಿತು ಕೇಂದ್ರ ಸರ್ಕಾರ ಹಾಗೂ ದೆಹಲಿ ಪೊಲೀಸರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರ ಹಾಕಿದ್ದಾರೆ.

Key words: Protest –Bengaluru-rajabhavana- condemns -Delhi violence