Sunday, September 13, 2026

BDA Apartments

ತುಮಕೂರು ಜಿಲ್ಲೆ ಶಿರಾ ಬಳಿ ಭೀಕರ ಅಪಘಾತ: ಇಬ್ಬರು ಸಾವು BDA JK_Adv BDA Adv
Home Crime ತುಮಕೂರು ಜಿಲ್ಲೆ ಶಿರಾ ಬಳಿ ಭೀಕರ ಅಪಘಾತ: ಇಬ್ಬರು ಸಾವು

ತುಮಕೂರು ಜಿಲ್ಲೆ ಶಿರಾ ಬಳಿ ಭೀಕರ ಅಪಘಾತ: ಇಬ್ಬರು ಸಾವು

ತುಮಕೂರು, ಮಾರ್ಚ್ 01, 2020 (www.justkannada.in): ತುಮಕೂರು ಜಿಲ್ಲೆ ಶಿರಾ ತಾಲೂಕಿನ ತಾವರೆಕೆರೆ ಪೊಲೀಸ್ ಠಾಣೆ ವ್ಯಾಪ್ತಿಯ ಉಜ್ಜನಕುಂಟೆ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ.

ಬೆಂಗಳೂರು ಮೂಲದ ಪವನ್ ಮತ್ತು ರಮೇಶ್ ಮೃತರು. ಬಸ್ ನಲ್ಲಿದ್ದ 10ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಇಂದು ಬೆಳಗ್ಗೆ 6.30ರ ಸುಮಾರಿಗೆ ಉಜ್ಜನಕುಂಟೆ ಬಳಿ ಸಾಗುತ್ತಿದ್ದ ಲಾರಿ ಮತ್ತು ಬಸ್ ನಡುವೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಅತಿವೇಗ, ನಿರ್ಲಕ್ಷ್ಯದ ಚಾಲನೆಯೇ ಅಪಘಾತಕ್ಕೆ ಕಾರಣವೆನ್ನಲಾಗಿದೆ.