Saturday, October 31, 2026

Dasara Wishes

ಸೆ.30ರೊಳಗೆ ರೈತರ ಸಮಸ್ಯೆಗಳ ಪರಿಹಾರಕ್ಕೆ ಕ್ರಮ ಕೈಗೊಳ್ಳದಿದ್ರೆ ವಿಧಾನಸೌಧಕ್...
Happy Dasara
Home Crime ಜವರಾಯನ ಅಟ್ಟಹಾಸ: ಭೀಕರ ಅಪಘಾತಕ್ಕೆ 13 ಮಂದಿ ಬಲಿ….

ಜವರಾಯನ ಅಟ್ಟಹಾಸ: ಭೀಕರ ಅಪಘಾತಕ್ಕೆ 13 ಮಂದಿ ಬಲಿ….

ತುಮಕೂರು,ಮಾ,6,2020(www.justkannada.in): ಕಾರು ಮತ್ತು ಟವೇರಾ ವಾಹನದ ನಡುವೆ ಭೀಕರ ಅಪಘಾತ ಸಂಭವಿಸಿ 13 ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕಿನಲ್ಲಿ ನಡೆದಿದೆ.

ಕುಣಿಗಲ್ ತಾಲೂಕಿನ ಬ್ಯಾಲದಕೆರೆ ಬಳಿ ಈ  ಭೀಕರ ಅಪಘಾತ. ನಡೆದಿದೆ. ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕಾರು ಬ್ಯಾಲದ ಕೆರೆ ಬಳಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ. ಈ ವೇಳೆ ಎದುರಿಗೆ ಬರುತ್ತಿದ್ದ ಟವೇರಾ ವಾಹನಕ್ಕೆ ಡಿಕ್ಕಿಯಾಗಿ ಸ್ಥಳದಲ್ಲೇ 12 ಮಂದಿ ಸಾವನ್ನಪ್ಪಿದರೇ ಓರ್ವ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಘಟನೆಯಲ್ಲಿ  ಗಂಭೀರ ಗಾಯಗೊಂಡಿರುವವರನ್ನ ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಟವೇರಾದಲ್ಲಿದ್ದ ಪ್ರಯಾಣಿಕರು ತಮಿಳುನಾಡಿನ ಹೊಸೂರಿನವರಾಗಿದ್ದು ಧರ್ಮಸ್ಥಳ ಪ್ರವಾಸ ಮುಗಿಸಿ ವಾಪಸ್ ಬರುತ್ತಿದ್ದರು ಎನ್ನಲಾಗಿದೆ. ಈ ಕುರಿತು ಅಮೃತೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words: tumakur- car- accident-13 people- death