Friday, August 14, 2026

BDA Apartments

Home Front Page ಬಿಜೆಪಿಗೆ ಸೇರ್ಪಡೆಯಾದ ಜ್ಯೋತಿರಾದಿತ್ಯ ಸಿಂಧಿಯಾ…

ಬಿಜೆಪಿಗೆ ಸೇರ್ಪಡೆಯಾದ ಜ್ಯೋತಿರಾದಿತ್ಯ ಸಿಂಧಿಯಾ…

ನವದೆಹಲಿ,ಮಾ,11,2020(www.justkannada.in):  ಮಧ್ಯಪ್ರದೇಶ ಕ್ಷಿಪ್ರ ರಾಜಕೀಯ ಬೆಳವಣಿಗೆ ವಿಚಾರಕ್ಕೆ ಸಂಬಂಧಿಸಿದಂತೆ ನಿನ್ನೆಯಷ್ಟೇ ಕಾಂಗ್ರೆಸ್ ಗೆ ಗುಡ್ ಬೈ ಹೇಳಿದ್ದ ಜ್ಯೋತಿರಾದಿತ್ಯ ಸಿಂಧಿಯಾ ಇಂದು ಬಿಜೆಪಿ ಸೇರ್ಪಡೆಯಾಗಿದ್ದಾರೆ.

ನವದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಜ್ಯೋತಿರಾದಿತ್ಯ ಸಿಂಧಿಯಾ ‘ಕಮಲ’ ಮುಡಿದಿದ್ದಾರೆ. ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ ಸಮ್ಮುಖದಲ್ಲಿ ಜ್ಯೋತಿರಾದಿತ್ಯ ಸಿಂಧಿಯಾ ಬಿಜೆಪಿಗೆ ಸೇರ್ಪಡೆಯಾಗಿದ್ದು ಬಿಜೆಪಿ ಪ್ರಾಥಮಿಕ ಸದಸ್ಯತ್ವ ನೀಡಿ ಹೂಗುಚ್ಛ ಶಾಲು ಹಾಕಿ ಸಿಂಧಿಯಾರನ್ನ ಸ್ವಾಗತಿಸಿದರು.

ನಿನ್ನೆ ನವದೆಹಲಿಯಲ್ಲಿ ಗೃಹಸಚಿವ ಅಮಿತ್​ ಷಾ ಮತ್ತು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾದ ಬಳಿಕ ಕಾಂಗ್ರೆಸ್​ಗೆ ರಾಜೀನಾಮೆಯನ್ನೂ ನೀಡಿದ್ದ ಅವರು ಇಂದು ಅಧಿಕೃತವಾಗಿ ಕಮಲ ಹಿಡಿದರು.

Key words: Jyothiraditya sindya- joins- BJP.