ಮೈಸೂರು,ಮಾ,12,2020(www.justkannada.in): ಮೈಸೂರಿನಲ್ಲಿ ಸಿಎಎ, ಎನ್.ಆರ್.ಸಿ ವಿರುದ್ಧ ಪ್ರತಿಭಟನೆ ಮುಂದುವರಿದೆ. ಸಿಎಎ, ಎನ್.ಆರ್.ಸಿ ಹಾಗೂ ಎನ್.ಪಿ.ಆರ್ ವಿರೋಧಿಸಿ ಇಂದು ಸಂವಿಧಾನ ರಕ್ಷಣಾ ಸಮಿತಿ ವತಿಯಿಂದ ಉಪವಾಸ ಸತ್ಯಾಗ್ರಹ ನಡೆಸಲಾಯಿತು.
ಸಿಎಎ, ಎನ್.ಆರ್.ಸಿ ವಿರೋಧಿಸಿ ಮೈಸೂರಿನ ಗಾಂಧಿವೃತ್ತದ ಬಳಿ ಸಂವಿಧಾನ ರಕ್ಷಣಾ ಸಮಿತಿ ವತಿಯಿಂದ ಮೌನ ಉಪವಾಸ ಸತ್ಯಾಗ್ರಹ ನಡೆಸಲಾಯಿತು. ಉಪವಾಸ ಸತ್ಯಾಗ್ರಹದಲ್ಲಿ ಹಿರಿಯ ಸಾಹಿತಿ ದೇವನೂರು ಮಹದೇವ್ ಭಾಗಿಯಾಗಿದ್ದರು.
ಪ್ರತಿಭಟನಾಕಾರರು ಕೇಂದ್ರದ ವಿರುದ್ಧ ಮೌನ ಪ್ರತಿಭಟನೆ ನಡೆಸಿ ಅಸಮಾಧಾನ ವ್ಯಕ್ತಪಡಿಸಿದರು. ಪ್ರತಿಭಟನೆಯಲ್ಲಿ ನೂರಾರು ಮಂದಿ ಭಾಗಿಯಾಗಿದ್ದರು.
Key words: mysore- protest-against- CAA, NRC






