Sunday, September 20, 2026

BDA Apartments

ಮಣ್ಣಿನ ಗುಡ್ಡ ಕುಸಿದು ಮೂವರು ಕಾರ್ಮಿಕರು ದುರ್ಮರಣ… BDA JK_Adv BDA Adv
Home Crime  ಮಣ್ಣಿನ ಗುಡ್ಡ ಕುಸಿದು ಮೂವರು ಕಾರ್ಮಿಕರು ದುರ್ಮರಣ….

 ಮಣ್ಣಿನ ಗುಡ್ಡ ಕುಸಿದು ಮೂವರು ಕಾರ್ಮಿಕರು ದುರ್ಮರಣ….

ಬೆಳಗಾವಿ,ಮೇ,27,2019(www.justkannada.in): ರಸ್ತೆಗೆ ಸೇತುವೆ ನಿರ್ಮಿಸಲು ಹಾಕಲಾಗಿದ್ದ ಗುಡ್ಡ ಕುಸಿದು ಮೂವರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ.

ಬೆಳಗಾವಿ ಜಿಲ್ಲೆ ಖಾನಾಪುರ ತಾಲ್ಲೂಕಿನ ದೇಸೂರು ಗ್ರಾಮದಲ್ಲಿ ಈ ಘಟನೆ ನಡೆದಿದೆ. ದುರ್ಗೇಶ್, ಅರ್ಜುನ್ ಮತ್ತು ಸುಖಾನ್ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಮೃತರ ಜಾರ್ಖಂಡ್ ಮೂಲದವರಾಗಿದ್ದು ಕಾಮಗಾರಿ ಕೆಲಸಕ್ಕಾಗಿ ಖಾನಾಪುರಕ್ಕೆ ಬಂದಿದ್ದರು ಎನ್ನಲಾಗಿದೆ.

ಬೆಳಗಾವಿ ಜಿಲ್ಲೆಯ ಖಾನಾಪುರದ ದೇಸೂರಿನಲ್ಲಿ, ಸೇತುವ ನಿರ್ಮಾಣಕ್ಕಾಗಿ ಕಾಮಗಾರಿ ನಡೆಸಲಾಗುತ್ತಿತ್ತು. ಮೂವರು ಕಾರ್ಮಿಕರು  ಸೇತುವೆ ಕೆಲಸಕ್ಕಾಗಿ ಗುಡ್ಡವನ್ನು ಅಗೆಯುವ ಕಾಮಗಾರಿಯಲ್ಲಿ ತೊಡಗಿದ್ದರು. ಈ ವೇಳೆ ಮಣ್ಣಿನ ಗುಡ್ಡ ಕುಸಿದು ಮೂವರು ಮೃತಪಟ್ಟಿದ್ದಾರೆ. ಬೆಳಗಾವಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words: Three workers fell dead when the mud collapsed.

#belagavi #workers #dead #collapsed.