ಇಟಲಿಯಿಂದ ಆಗಮಿಸಿದ ಸಚಿವ ಆನಂದ್ ಸಿಂಗ್ ಅವರ ಪುತ್ರಿ ಮೇಲೆ ಆರೋಗ್ಯ ಇಲಾಖೆ ನಿಗಾ…

ಬೆಂಗಳೂರು,ಮಾ,18,2020(www.justkannada.in):  ಕೊರೋನಾ ವೈರಸ್ ಭೀತಿ ಹಿನ್ನೆಲೆ ಇಟಲಿಯ ರೋಮ್ ವಿಮಾನ ನಿಲ್ದಾಣದಲ್ಲಿ ಸಿಲುಕಿದ್ದ ಅರಣ್ಯ ಸಚಿವ ಆನಂದ್ ಸಿಂಗ್ ಅವರ ಪುತ್ರಿ ಇಂದು ಬೆಂಗಳೂರಿಗೆ ವಾಪಸ್ ಆಗಿದ್ದಾರೆ.

ಸಚಿವ ಆನಂದ್ ಸಿಂಗ್ ಪುತ್ರಿ  ವ್ಯಾಸಂಗಕ್ಕಾಗಿ ಇಟಲಿಯಲ್ಲಿ ಇದ್ದರು. ರೋಮ್ ವಿಮಾನ ನಿಲ್ದಾಣದಲ್ಲಿ ತಮ್ಮ  ಮಗಳು ಹಾಗೂ ಭಾರತೀಯ ವಿದ್ಯಾರ್ಥಿಗಳು ಸಿಲುಕಿರುವ ಬಗ್ಗೆ ನಿನ್ನೆಯಷ್ಟೆ ಸಚಿವ ಆನಂದ್ ಸಿಂಗ್  ಅಳಲು ತೋಡಿಕೊಂಡಿದ್ದರು. ಅವರನ್ನ ರಕ್ಷಿಸುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದರು.

ಇದೀಗ ಸಚಿವ ಆನಂದ್ ಸಿಂಗ್ ಪುತ್ರಿ ಇಂದು ಇಟಲಿಯಿಂದ ಭಾರತಕ್ಕೆ ವಾಪಸ್ ಆಗಿದ್ದಾರೆ. ಇದೀಗ ಇವರ ಮೇಲೂ ಆರೋಗ್ಯ ಇಲಾಖೆ ನಿಗಾ ವಹಿಸಿದೆ. ಇವರಿಗೆ ಕಡ್ಡಾಯವಾಗಿ 14 ದಿನ ಮನೆಯಲ್ಲಿ ಪ್ರತ್ಯೇಕವಾಗಿರಲು ಸೂಚನೆ ನೀಡಲಾಗಿದೆ.

ಮನೆಯಲ್ಲಿಯೇ ಪ್ರತ್ಯೇಕ ಕೊಠಡಿಯಲ್ಲಿ ಇವರನ್ನು ಐಸೋಲೇಟ್ ಮಾಡಲಾಗಿದೆ. ಯಾರ ಜೊತೆಗೂ ಸಂಪರ್ಕ ಹೊಂದುವಂತಿಲ್ಲ ಎಂದು ಸೂಚಿಸಲಾಗಿದೆ. ಇನ್ನು ಪ್ರತ್ಯೇಕ ಕೊಠಡಿ, ಪ್ರತ್ಯೇಕ ತಟ್ಟೆ ಲೋಟ, ಪ್ರತ್ಯೇಕ ಟಾಯ್ಲೆಟ್ ಬಳಸಬೇಕು. ಸ್ವಲ್ಪ, ಜ್ವರ, ಕೆಮ್ಮು, ನೆಗಡಿ ಇದ್ದರೆ ತಕ್ಷಣ ತಿಳಿಸಬೇಕು ಎಂದು ಆರೋಗ್ಯ ಇಲಾಖೆ ಸೂಚನೆ ನೀಡಿದೆ.   ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿ ಕೂಡ ನಿತ್ಯ ಎರಡು ಬಾರಿ ಕರೆ ಮಾಡುತ್ತಾರೆ. ಆರೋಗ್ಯದ ಬಗ್ಗೆ ಮಾಹಿತಿ ಪಡೆಯುತ್ತಿರುತ್ತಾರೆ. ಸ್ಪಷ್ಟ ಮಾಹಿತಿ ನೀಡಬೇಕು ಎಂದು ಆರೋಗ್ಯ ಇಲಾಖೆ ಸೂಚನೆ ನೀಡಿದೆ.

Key words: minister-Anand Singh’s- daughter- arrives- Bangalore-from-italy