Sunday, August 23, 2026

BDA Apartments

Home Front Page ಮದ್ಯ ಮಾರಾಟಕ್ಕೆ ಅವಕಾಶ ಬೇಡ : ಸಚಿವ ರಮೇಶ್ ಜಾರಕಿಹೊಳಿ‌

ಮದ್ಯ ಮಾರಾಟಕ್ಕೆ ಅವಕಾಶ ಬೇಡ : ಸಚಿವ ರಮೇಶ್ ಜಾರಕಿಹೊಳಿ‌

ಬೆಂಗಳೂರು, ಏಪ್ರಿಲ್ 13, 2020 (www.justkannada.in): ಎಂ.ಎಸ್.ಐ.ಎಲ್. ಸೇರಿದಂತೆ ಬೆಳಗಾವಿ ಜಿಲ್ಲೆಯಲ್ಲಿ ಯಾವುದೇ ಕಾರಣಕ್ಕೂ ಮದ್ಯ ಮಾರಾಟಕ್ಕೆ ಅವಕಾಶ ನೀಡಬಾರದು. ಈ ಬಗ್ಗೆ ಮುಖ್ಯಮಂತ್ರಿಗಳ ಜತೆ ಚರ್ಚೆ ನಡೆಸಿ ಅವರಿಗೆ ಮನವರಿಕೆ ಮಾಡಲಾಗುವುದು ಎಂದು ಜಲಸಂಪನ್ಮೂಲ ಸಚಿವರಾದ  ರಮೇಶ್ ಜಾರಕಿಹೊಳಿ ತಿಳಿಸಿದರು.

ಬೆಳಗಾವಿಯಲ್ಲಿ ನಡೆಸ *ಕೋವಿಡ್ 19* ಕುರಿತ ಉನ್ನತ ಮಟ್ಟದ ಸಭೆಯಲ್ಲಿ ‌ಮಾತನಾಡಿದ ಜಲಸಂಪನ್ಮೂಲ ಇಲಾಖೆಯ ಸಚಿವ ರಮೇಶ್ ಜಾರಕಿಹೊಳಿ, ಅವರು ದೆಹಲಿಯ ತಬ್ಲಿಘಿ ಧಾರ್ಮಿಕ ಸಭೆಗೆ ಹೋಗಿಬಂದಿರುವವರು ತಮ್ಮ ಸಂಬಂಧಿಕರನ್ನು ಭೇಟಿ ಮಾಡಲು ಹೋಗುವುದು ರೂಢಿ. ಆದ್ದರಿಂದ ಅಂತಹವರನ್ನು ಪತ್ತೆಹಚ್ಚುವ ಕೆಲಸ ತುರ್ತಾಗಿ ನಡೆಸಬೇಕು. ಇಲ್ಲದಿದ್ದರೆ ಸೋಂಕು ಇನ್ನಷ್ಟು ಹರಡುತ್ತದೆ. ಯಾವುದೇ ಕಾರಣಕ್ಕೂ ಇಂತಹ ಸ್ಥಿತಿ ಉದ್ಭವಿಸಬಾರದು ಎಂದು ಅಧಿಕಾರಿಗಳಿಗೆ ತಿಳಿಸಿದರು.

ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ್ ಶೆಟ್ಟರ್, ಜಿಲ್ಲೆಯ ಜನಪ್ರತಿನಿಧಿಗಳು, ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.