Sunday, August 23, 2026

BDA Apartments

Home Front Page ಸಿಎಂ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ ತಪ್ಪಿಗೆ ಅಮಾನತಾದ ಉಪನ್ಯಾಸಕ

ಸಿಎಂ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ ತಪ್ಪಿಗೆ ಅಮಾನತಾದ ಉಪನ್ಯಾಸಕ

ಚಿಕ್ಕಮಗಳೂರು, ಏಪ್ರಿಲ್ 30, 2020 (www.justkannada.in): ಸಿಎಂ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ ಆರೋಪದಲ್ಲಿ ಚಿಕ್ಕಮಗಳೂರಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರೊಬ್ಬರನ್ನು ಅಮಾನುತ ಮಾಡಲಾಗಿದೆ.

ಕೊರೊನಾ ವಿಚಾರಕ್ಕೆ ಸಂಬಂಧಿಸಿದಂತೆ ಈ ಉಪನ್ಯಾಸ ಅವಹೇಳನಕಾರಿ ಪೋಸ್ಟ್ ಹಾಕಿದ್ದರು. ಬಿ.ಎಸ್.ಮಂಜುನಾಥ್ ಅಮಾನತುಗೊಂಡ ಉಪನ್ಯಾಸಕ.

ಚಿಕ್ಕಮಗಳೂರು ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಜೀವಶಾಸ್ತ್ರ ಉಪನ್ಯಾಸಕರಾಗಿರುವ ಮಂಜುನಾಥ್ ರನ್ನುಅಮಾನತುಗೊಳಿಸಿ ಪದವಿಪೂರ್ವ ಶಿಕ್ಷಣ ಇಲಾಖೆಯ ಶಿಸ್ತು ಪ್ರಾಧಿಕಾರ ಆದೇಶ ಹೊರಡಿಸಿದೆ.

ಮಂಜುನಾಥ್ ಸಿಎಂ ವಿರುದ್ಧ ಮಾಡಿದ ಅವಹೇಳನಕಾರಿ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ ಆರೋಪದ ಮೇಲೆ ಮಂಜುನಾಥ್ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗಿದೆ.