Tuesday, August 18, 2026

BDA Apartments

Home Front Page ಇಂದು ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ

ಇಂದು ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ

ಬೆಂಗಳೂರು, ಮೇ 05, 2020 (www.justkannada.in): ಪದವಿ ಪೂರ್ವ ಶಿಕ್ಷಣ ಇಲಾಖೆ ಇಂದು ಪ್ರಥಮ ಪಿಯುಸಿ ಫಲಿತಾಂಶವನ್ನು ಪ್ರಕಟಿಸಲಿದೆ.

ಕೊರೋನಾವೈರಸ್ ಕೋವಿಡ್ 19 (Covid-19) ಹಿನ್ನೆಲೆಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಫಲಿತಾಂಶವನ್ನು ಕಾಲೇಜುಗಳಲ್ಲಿ ಪ್ರಕಟಿಸದೆ ಕಾಲೇಜು ಆಡಳಿತ ಮಂಡಳಿಗಳು ವಿದ್ಯಾರ್ಥಿಗಳ ಮೊಬೈಲ್​​ಗೆ ಸಂದೇಶ ಅಥವಾ ಇಮೇಲ್‌ ಮೂಲಕ ಫಲಿತಾಂಶದ ವಿವರ ಕಳುಹಿಸುವಂತೆ ಸರ್ಕಾರ ಸೂಚಿಸಿದೆ.

ಕಳೆದ ವಾರವಷ್ಟೇ ಕಾಲೇಜುಗಳು ಮೇ 5ನೇ ತಾರೀಕಿನಂದು ಪ್ರಥಮ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟಿಸಬೇಕು ಎಂದು ಸುತ್ತೋಲೆ ಹೊರಡಿಸಿದ್ದ ಪೂರ್ವ ಶಿಕ್ಷಣ ಇಲಾಖೆ ಇದರಲ್ಲಿ ಅನುತ್ತೀರ್ಣರಾಗುವ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆಯನ್ನು ಕಾಲೇಜುಮಟ್ಟದಲ್ಲಿಯೇ ನಿರ್ವಹಿಸಲು‌ ಮಾನದಂಡಗಳನ್ನು ಸದ್ಯದಲ್ಲೇ ತಿಳಿಸಲಿದ್ದೇವೆ ಎಂದು ಸ್ಪಷ್ಟಪಡಿಸಿತ್ತು.