Sunday, August 23, 2026

BDA Apartments

Home Front Page ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಚೇತರಿಕೆಗೆ ದೇವೇಗೌಡ ಸೇರಿದಂತೆ ಹಲವು ಗಣ್ಯರು ಹಾರೈಕೆ

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಚೇತರಿಕೆಗೆ ದೇವೇಗೌಡ ಸೇರಿದಂತೆ ಹಲವು ಗಣ್ಯರು ಹಾರೈಕೆ

ಬೆಂಗಳೂರು. ಮೇ 11, 2020 (www.justkannada.in):  ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರುವ  ಮಾಜಿ ಪ್ರಧಾನಿ ಮನ್ ಮೋಹನ್ ಸಿಂಗ್ ಶೀಘ್ರ ಗುಣಮುಖರಾಗಲೆಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಸೇರಿದಂತೆ ಹಲವು ಗಣ್ಯರು ಪ್ರಾರ್ಥನೆ ಮಾಡಿದ್ದಾರೆ.

ಎಚ್.ಡಿ.ದೇವೇಗೌಡ ಈ ಕುರಿತು ಟ್ವೀಟ್ ಮಾಡಿದ್ದು, ‘ಮಾಜಿ ಪ್ರಧಾನಿ ಡಾ.ಮನ್ ಮೋಹನ್ ಸಿಂಗ್ ಆದಷ್ಟು ಬೇಗ ಚೇತರಿಸಿಕೊಳ್ಳಲಿ. ದೇಶದಲ್ಲಿ ಇಂತಹ ಬಿಕ್ಕಟ್ಟಿನ ಸಮಯದಲ್ಲಿ ಇಂತಹ ಹಿರಿಯ ನಾಯಕನ ಮಾರ್ಗದರ್ಶನ ಅತ್ಯಾವಶ್ಯಕ’ ಎಂದು ಹೇಳಿದ್ದಾರೆ.

ಇನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಟ್ವೀಟ್ ಮಾಡಿ ಮನ್ ಮೋಹನ್ ಸಿಂಗ್ ಶೀಘ್ರವೇ ಚೇತರಿಸಿಕೊಳ್ಳಲಿ ಎಂದು ಆಶಿಸಿದ್ದಾರೆ. ದೇಶದ ಬಿಲಿಯನ್ ಗಿಂತ ಹೆಚ್ಚು ನಾಗರಿಕರು ಮನ್ ಮೋಹನ್ ಸಿಂಗ್ ಅವರು ಶೀಘ್ರವೇ ಗುಣಮುಖರಾಗಲೆಂದು ಪ್ರಾರ್ಥನೆ ಸಲ್ಲಿಸುತ್ತಿದ್ದಾರೆಂದು ಟ್ವೀಟ್ ಮಾಡಿದ್ದಾರೆ.