Sunday, September 20, 2026

BDA Apartments

ಇಂದು ಅಧಿಕಾರಿಗಳ ಜತೆ ಸಿಎಂ ಯಡಿಯೂರಪ್ಪ ಮಹತ್ವದ ಸಭೆ BDA JK_Adv BDA Adv
Home Front Page ಇಂದು ಅಧಿಕಾರಿಗಳ ಜತೆ ಸಿಎಂ ಯಡಿಯೂರಪ್ಪ ಮಹತ್ವದ ಸಭೆ

ಇಂದು ಅಧಿಕಾರಿಗಳ ಜತೆ ಸಿಎಂ ಯಡಿಯೂರಪ್ಪ ಮಹತ್ವದ ಸಭೆ

ಬೆಂಗಳೂರು, ಮೇ 12, 2020 (www.justkannada.in): ಆರ್ಥಿಕ ಪರಿಸ್ಥಿತಿ ಸಂಬಂಧ ಚರ್ಚೆ ನಡೆಸಲು ಸಿಎಂ ಯಡಿಯೂಪ್ಪ ಇಂದು ಹಣಕಾಸು ಇಲಾಖೆ ಅಧಿಕಾರಿಗಳ ಸಭೆ ಕರೆದಿದ್ದಾರೆ.

ಮಾರಕ ಕೊರೊನಾ ವೈರಸ್ ನಿಯಂತ್ರಣ ಹಿನ್ನೆಲೆಯಲ್ಲಿ ಲಾಕ್ ಡೌನ್ ವಿಧಿಸಿದ ಪರಿಣಾಮ ರಾಜ್ಯದ ಬೊಕ್ಕಸಕ್ಕೆ ಅಪಾರ ನಷ್ಟ ಸಂಭವಿಸಿದೆ. ಈ ಕುರಿತು ಸಿಎಂ ಅಧಿಕಾರಿಗಳ ಜತೆ ಮಾತುಕತೆ ನಡೆಸಲಿದ್ದಾರೆ.

ಇಂದು ನಡೆಯುತ್ತಿರುವ ಸಭೆಯಲ್ಲಿ ರಾಜ್ಯದ ಆರ್ಥಿಕ ಪುನಶ್ಚೇತನಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚೆ ನಡೆಯಲಿದೆ. ಲಾಕ್​​ಡೌನ್​​ ಸಡಿಲಗೊಳಿಸಿದ ಬಳಿಕ ಆರ್ಥಿಕ ಸ್ಥಿತಿ ಹೇಗಿದೆ, ಆರ್ಥಿಕ ಪುನಶ್ಚೇತನಕ್ಕೆ ಯಾವ ಕ್ರಮ ಕೈಗೊಳ್ಳಬಹುದು ಎಂಬಿತ್ಯಾದಿ ವಿಚಾರಗಳ ಕುರಿತು ಚರ್ಚೆ ನಡೆಯಲಿದೆ.

ಇನ್ನು ಮತ್ತೆ ಲಾಕ್ ಡೌನ್ ಬಿಗಿಗೊಳಿಸಿದರೆ, ರಾಜ್ಯದ ಬೊಕ್ಕಸಕ್ಕೆ ಆದಾಯದ ಮೂಲ ಹೇಗೆ, ಸರ್ಕಾರಿ ನೌಕರರಿಗೆ ಸಂಬಳ ಹೇಗೆ ಸೇರಿದಂತೆ ಇತರೇ ವಿಷಯಗಳ ಕುರಿತಂತೆಯೂ ಪ್ರಸ್ತಾಪವಾಗಲಿದೆ.