Sunday, September 27, 2026

BDA Apartments

ನಾಳೆ ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಮಹತ್ವದ ಸಚಿವ ಸಂಪುಟ ಸಭೆ BDA JK_Adv BDA Adv
Home Front Page ನಾಳೆ ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಮಹತ್ವದ ಸಚಿವ ಸಂಪುಟ ಸಭೆ

ನಾಳೆ ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಮಹತ್ವದ ಸಚಿವ ಸಂಪುಟ ಸಭೆ

ಬೆಂಗಳೂರು, ಮೇ 13, 2020 (www.justkannada.in): ಸಚಿವ ಸಂಪುಟ ಸಭೆ ನಾಳೆ ಸಂಜೆ 4 ಗಂಟೆಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ನಡೆಯಲಿದೆ. ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸಂಕಷ್ಟದಲ್ಲಿರುವ ರಾಜ್ಯದ ವಿವಿಧ ವರ್ಗದ ಜನರಿಗೆ ವಿಶೇಷ ಪ್ಯಾಕೇಜ್ ಘೋಷಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ನಾಳೆ ಸಂಜೆ 4 ಗಂಟೆಗೆ ಮಹತ್ವದ ಸಚಿವ ಸಂಪುಟ ಸಭೆಯನ್ನು ಕರೆಯಲಾಗಿದೆ. ಈಗಾಗಲೇ 1610 ಕೋಟಿ ವಿಶೇಷ ಪ್ಯಾಕೇಜ್ ಅನ್ನು ಲಾಕ್ ಡೌನ್ ಸಂಕಷ್ಟದಲ್ಲಿರುವಂತ ರಾಜ್ಯದ ಜನರಿಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಘೋಷಣೆ ಮಾಡಿದ್ದರು.

ಇದೀಗ ಕೇಂದ್ರ ಸರ್ಕಾರ 20 ಲಕ್ಷ ಕೋಟಿ ವಿಶೇಷ ಹಣಕಾಸು ಪ್ಯಾಕೇಜ್ ಅನ್ನು ದೇಶದ ಜನರಿಗಾಗಿ ಘೋಷಣೆ ಮಾಡಿದ ನಂತ್ರ, ನಾಳೆ ರಾಜ್ಯದ ಮಹತ್ವದ ಸಚಿವ ಸಂಪುಟ ಸಭೆ ಸಂಜೆ 4 ಗಂಟೆಗೆ ನಡೆಯಲಿದೆ.