Tuesday, August 11, 2026

BDA Apartments

Home Front Page ಮುತ್ತಪ್ಪ ರೈ ಸಾವಿನ ವದಂತಿಗೆ ಸ್ಪಷ್ಟನೆ ನೀಡಿದ ಬೆಂಗಳೂರು ಪೂರ್ವ ವಲಯ ಡಿಸಿಪಿ

ಮುತ್ತಪ್ಪ ರೈ ಸಾವಿನ ವದಂತಿಗೆ ಸ್ಪಷ್ಟನೆ ನೀಡಿದ ಬೆಂಗಳೂರು ಪೂರ್ವ ವಲಯ ಡಿಸಿಪಿ

ಬೆಂಗಳೂರು, ಮೇ 14, 2020 (www.justkannada.in): ಜಯ ಕರ್ನಾಟಕ ಸಂಘಟನೆ ಸ್ಥಾಪಕ ಮುತ್ತಪ್ಪ ರೈ ಸಾವಿನ ವದಂತಿ ಹಿನ್ನೆಲೆಯಲ್ಲಿ ಬೆಂಗಳೂರು ಪೂರ್ವ ವಲಯ ಡಿಸಿಪಿ ಸ್ಪಷ್ಟನೆ ನೀಡಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಸುದ್ದಿ ಸುಳ್ಳು. ಮುತ್ತಪ್ಪ ರೈ ನಿಧನರಾಗಿಲ್ಲ, ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಅವರು ತೀವ್ರ ನಿಗಾ ಘಟಕದಲ್ಲಿ ವೆಂಟಿಲೇಟರ್ ಮೂಲಕ ಚಿಕಿತ್ಸೆ ಪಡೆಯುತ್ತಿದ್ದಾರೆ  ಎಂದು ತಿಳಿಸಿದ್ದಾರೆ.

ಕಳೆದ ಎರಡು ವರ್ಷಗಳಿಂದ ಕ್ಯಾನ್ಸರ್ ನಿಂದ ಬಳಲುತ್ತಿರುವ ಮುತ್ತಪ್ಪ ರೈ ಅವರಿಗೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಮುತ್ತಪ್ಪ ರೈಗೆ ಚಿಕಿತ್ಸೆ ನೀಡಲಾಗುತ್ತಿದೆ. ಏಪ್ರಿಲ್ 28 ರಂದೆ ಆಸ್ಪತ್ರೆಗೆ ಮುತ್ತಪ್ಪ ರೈ ದಾಖಲಾಗಿದ್ದರು.