Sunday, August 23, 2026

BDA Apartments

Home Front Page ಗ್ರಾಮ ಪಂಚಾಯಿತಿ ಸದಸ್ಯರ ಅಧಿಕಾರ ಅವಧಿ ವಿಸ್ತರಣೆಗೆ ಸಿಎಂಗೆ ಸಿದ್ದರಾಮಯ್ಯ ಪತ್ರ

ಗ್ರಾಮ ಪಂಚಾಯಿತಿ ಸದಸ್ಯರ ಅಧಿಕಾರ ಅವಧಿ ವಿಸ್ತರಣೆಗೆ ಸಿಎಂಗೆ ಸಿದ್ದರಾಮಯ್ಯ ಪತ್ರ

ಬೆಂಗಳೂರು, ಮೇ 17, 2020 (www.justkannada.in): ಚುನಾವಣೆ ನಡೆಸುವವರೆಗೆ ಗ್ರಾಮ ಪಂಚಾಯಿತಿಗಳಲ್ಲಿ ಪ್ರಸ್ತುತ ಅಧಿಕಾರದಲ್ಲಿರುವ ಸದಸ್ಯರನ್ನು ಮುಂದುವರಿಸಬೇಕು ಎಂದು ವಿಧಾನಸಭೆ ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಈ ಸಂಬಂಧ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರಿಗೆ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ. ಗ್ರಾಮ ಪಂಚಾಯಿತಿಗಳಿಗೆ ಹೊಸ ಆಡಳಿತ ಸಮಿತಿ ರಚಿಸುವ ಅಥವಾ ಆಡಳಿತಾಧಿಕಾರಿ ನೇಮಿಸುವ ಕೆಟ್ಟ ಸಂಪ್ರದಾಯಕ್ಕೆ ಸರ್ಕಾರ ನಾಂದಿ ಹಾಡಬಾರದು. ತಾತ್ಕಾಲಿಕ ವ್ಯವಸ್ಥೆ ಮಾಡಲೇಬೇಕೆಂದಿದ್ದರೆ 1987ರಲ್ಲಿ ಮಾಡಿದಂತೆ ಅವಧಿ ವಿಸ್ತರಿಸಬೇಕು ಎಂದು ಆಗ್ರಹಿಸಿದ್ದಾರೆ.

ಕೊರೊನಾ ಬಿಕ್ಕಟ್ಟಿನ ನೆಪದಲ್ಲಿ ಚುನಾವಣೆ ನಡೆಸದೆ ಜಿಲ್ಲಾಧಿಕಾರಿಗಳ ಮೂಲಕ ಆಡಳಿತಾಧಿಕಾರಿಗಳನ್ನು ಮತ್ತು ನಾಮನಿರ್ದೇಶಿತ ಆಡಳಿತ ಸಮಿತಿ ರಚಿಸಲು ಸರ್ಕಾರ ಮುಂದಾದರೆ, ಅದು ಪ್ರಜಾಪ್ರಭುತ್ವದ ಮತ್ತು ಸಂವಿಧಾನದ ಆಶಯಗಳಿಗೆ ವಿರುದ್ಧವಾಗುತ್ತದೆ ಎಂದೂ ಅಭಿಪ್ರಾಯಪಟ್ಟಿದ್ದಾರೆ.