Sunday, August 23, 2026

BDA Apartments

Home Front Page ಮಸ್ಕಟ್’ನಿಂದನಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ 115 ಪ್ರಯಾಣಿಕರು

ಮಸ್ಕಟ್’ನಿಂದನಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ 115 ಪ್ರಯಾಣಿಕರು

ಬೆಂಗಳೂರು, ಮೇ 21, 2020 (www.justkannada.in): ಕೋವಿಡ್-19 ಲಾಕ್ ಡೌನ್ ಪರಿಸ್ಥಿತಿಯಲ್ಲಿ ಮಸ್ಕಟ್ ನಿಂದ ಬುಧವಾರ ರಾತ್ರಿ 7ಕ್ಕೆ ದೇವನಹಳ್ಳಿಯಲ್ಲಿರುವ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ 115 ಮಂದಿ ಅನಿವಾಸಿ ಭಾರತೀಯರು ಆಗಮಿಸಿದ್ದಾರೆ.

ಬೆಂಗಳೂರಿಗೆ ಬಂದಿಳಿದ ಆರನೇ ವಿಮಾನದಲ್ಲಿ ಗರ್ಭಿಣಿಯರು, ಮಕ್ಕಳು ಸೇರಿದಂತೆ ಒಟ್ಟು 115 ಪ್ರಯಾಣಿಕರು ಸರ್ಕಾರದ ನಿರ್ದೇಶನದಂತೆ ಆಗಮಿಸಿದರು. 115 ಪ್ರಯಾಣಿಕರ ಆರೋಗ್ಯ ತಪಾಸಣೆ ಮಾಡಿಸಲಾಗಿದ್ದು, ಯಾವುದೇ ಪ್ರಯಾಣಿಕರಲ್ಲಿ ಕೊರೋನಾ ವೈರಾಣು ಸೋಂಕಿನ ಲಕ್ಷಣಗಳು ಕಂಡುಬಂದಿರುವುದಿಲ್ಲ.

ಆರೋಗ್ಯ ತಪಾಸಣೆಯ ಬಳಿಕ, 115 ಪ್ರಯಾಣಿಕರನ್ನು 14 ದಿನಗಳ ಕ್ವಾರಂಟೈನ್ ಗಾಗಿ ಹೋಟೆಲ್ ಗಳಿಗೆ ಬಿಎಂಟಿಸಿ ಬಸ್’ಗಳ ಮೂಲಕ ಕಳುಹಿಸಿಕೊಡಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ತಿಳಿಸಿದ್ದಾರೆ.