Saturday, August 15, 2026

BDA Apartments

Home Front Page ಆರೋಗ್ಯ ಸಚಿವ ಶ್ರೀರಾಮುಲುಗೆ ಅದ್ಧೂರಿ ಸ್ವಾಗತ: ಲಾಕ್ ಡೌನ್ ನಿಯಮ ಉಲ್ಲಂಘನೆ…

ಆರೋಗ್ಯ ಸಚಿವ ಶ್ರೀರಾಮುಲುಗೆ ಅದ್ಧೂರಿ ಸ್ವಾಗತ: ಲಾಕ್ ಡೌನ್ ನಿಯಮ ಉಲ್ಲಂಘನೆ…

ಚಿತ್ರದುರ್ಗ, ಜೂ,2,2020(www.justkannada.in): ರಾಜ್ಯದಲ್ಲಿ ದಿನೇ ದಿನೇ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು ಸೋಂಕು ಹರಡದಂತೆ ತಡೆಯಲು  ಲಾಕ್ ಡೌನ್ ಜಾರಿ ಮಾಡಿಸಾಮಾಜಿಕ ಅಂತರ ಮಾಸ್ಕ್ ಧರಿಸುವುದು ಸೇರಿ ಮುಂತಾದ ಕ್ರಮಗಳನ್ನ ಕೈಗೊಳ್ಳಲಾಗಿದೆ. ಆದರೆ  ಸ್ವತಹ ಆರೋಗ್ಯ ಸಚಿವರೇ ಲಾಕ್ ಡೌನ್ ನಿಯಮ ಉಲ್ಲಂಘಿಸಿರುವ ಘಟನೆ ಇಂದು ನಡೆದಿದೆ.

ಆರೋಗ್ಯ ಸಚಿವ ವಿ.ಶ್ರೀರಾಮುಲು ಲಾಕ್ ಡೌನ್ ನಿಯಮ ಉಲ್ಲಂಘಿಸಿದ್ದಾರೆ. ಇಂದು ವೇದಾವತಿ ನದಿಗೆ ಬಾಗಿನ ಅರ್ಪಿಸಲು ಚಿತ್ರದುರ್ಗದ ಚಳ್ಳಕೆರೆ ತಾಲೂಕಿನ ಪರುಶುರಾಂಪುರ ಗ್ರಾಮಕ್ಕೆ ಆಗಮಿಸಿದ್ದ ಜಿಲ್ಲಾ ಉಸ್ತುವಾರಿ ಸಚಿವ, ಆರೋಗ್ಯ ಸಚಿವ ಶ್ರೀರಾಮುಲು ಅವರಿಗೆ ಅದ್ಧೂರಿ ಸ್ವಾಗತವನ್ನು ಮಾಡಲಾಗಿದೆ.Lockdown- rules- violation - Health Minister- Sriramulu

ಸಚಿವರಿಗೆ ಅದ್ಧೂರಿ ಸ್ವಾಗತ ಕೋರಲು ನೂರಾರು ಸಂಖ್ಯೆಯಲ್ಲಿ ಜನ ಸೇರಿದ್ದರು. ಅಲ್ಲದೆ ಸಚಿವರಿಗೆ ಬೃಹತ್ ಸೇಬಿನ ಹಾರ ಹಾಕಿ ಹೂ ಮಳೆಯನ್ನ ಸುರಿಸಿ ಅದ್ದೂರಿ ಮೆರವಣಿಗೆ ನಡೆಸಿದ್ದಾರೆ.  ರಾಜ್ಯ ಮಹಾಮಾರಿ ಕೊರೋನಾದಿಂದ ಸಂಕಷ್ಟದಲ್ಲಿದೆ. ಹೀಗಾಗಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಕಡ್ಡಾಯವಾಗಿದೆ. ಆದರೆ ಸಚಿವ ಶ್ರೀರಾಮುಲು ಅವರಿಗೆ ಅದ್ಧೂರಿ ಸ್ವಾಗತ ಕೋರುವ ವೇಳೆ ಜನಸ್ತೋಮ ಸೇರಿದ್ದು ಸಾಮಾಜಿಕ ಅಂತರವಿಲ್ಲದೆ ಲಾಕ್ ಡೌನ್ ನಿಯಮ ಉಲ್ಲಂಘನೆ ಮಾಡಲಾಗಿದೆ.

Key words: Lockdown- rules- violation – Health Minister- Sriramulu