ಹುತಾತ್ಮ ಯೋಧರ ಮಕ್ಕಳ ವಿದ್ಯಾರ್ಥಿ ವೇತನ ಹೆಚ್ಚಳ; ಮೊದಲ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ…

ನವದೆಹಲಿ,ಮೇ,31,2019(www.justkannada.in): 2ನೇ ಬಾರಿಗೆ ದೇಶದ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿರುವ ಪ್ರಧಾನಿ ಮೋದಿ ಅವರು ಮೊದಲ ಸಚಿವ ಸಂಪುಟ ಸಭೆಯಲ್ಲೇ ಹುತಾತ್ಮ ಯೋಧರ ಮಕ್ಕಳಿಗೆ ಸಿಹಿಸುದ್ದಿ ನೀಡಿದ್ದಾರೆ.

ನಿನ್ನೆ ಪ್ರಧಾನಿಯಾಗಿ ನರೇಂದ್ರ ಮೋದಿ ಅವರು ಹಾಗೂ 25 ಮಂದಿ ಸದಸ್ಯರು ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇಂದು ಪ್ರಧಾನಿ ನರೇಂದ್ರ ಮೋದಿ ತಮ್ಮ ಸಂಪುಟ ಸಹೋದ್ಯೋಗಿಗಳಿಗೆ ಖಾತೆಗಳನ್ನ ಹಂಚಿಕೆ ಮಾಡಿದರು.

ಖಾತೆ ಹಂಚಿಕೆ ಬಳಿಕ ಇದೀಗ ಪ್ರಧಾನಿ ಮೋದಿ ನೇತೃತ್ವದ  2ನೇ ಅವಧಿಯ ಸರ್ಕಾರದ ಮೊದಲ ಕೇಂದ್ರ ಸಚಿವ ಸಂಪುಟ ಸಭೆ ನಡೆಯುತ್ತಿದೆ. ಸಭೆಯಲ್ಲಿ ಗೃಹ ಸಚಿವ ಅಮಿತ್ ಶಾ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿ 24 ಕೇಂದ್ರ ಸಚಿವರು ಭಾಗಿಯಾಗಿದ್ದಾರೆ.

ಮೊದಲ ಸಚಿವ ಸಂಪುಟ ಸಭೆಯಲ್ಲಿ ಹುತಾತ್ಮ ಯೋಧರ ಮಕ್ಕಳಿಗೆ ಪ್ರಧಾನಿ ಮೋದಿ ಸಿಹಿಸುದ್ದಿ ನೀಡಿದ್ದಾರೆ. ಹುತಾತ್ಮ ಯೋಧರ ಮಕ್ಕಳ ವಿದ್ಯಾರ್ಥಿ ವೇತನ ಹೆಚ್ಚಳ ಮಾಡಿದ್ದಾರೆ. ವಿದ್ಯಾರ್ಥಿಗಳಿಗೆ 2ಸಾವಿರ ರೂ ನಿಂದ 2,500  ರೂಗೆ ಹಾಗೂ ವಿದ್ಯಾರ್ಥಿನೀಯರಿಗೆ  2,250 ರೂ ನಿಂತ 3 ಸಾವಿರ ರೂಗೆ ವಿದ್ಯಾರ್ಥಿ ವೇತನ ಹೆಚ್ಚಳ ಮಾಡಲಾಗಿದೆ.

Key words: Increase in scholarships for Martyrs soldier‘s childrens- Decision on the first Union cabinet meeting …

#Martyrswarriors #scholarships #Unioncabinet #meeting