Thursday, August 27, 2026

BDA Apartments

Home Front Page ಅತಿಥಿ ಉಪನ್ಯಾಸಕರ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸರ್ಕಾರಕ್ಕೆ ಮನವಿ ಸಲ್ಲಿಕೆ…

ಅತಿಥಿ ಉಪನ್ಯಾಸಕರ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸರ್ಕಾರಕ್ಕೆ ಮನವಿ ಸಲ್ಲಿಕೆ…

ಮೈಸೂರು,ಜೂ,19,2020(www.justkannada.in):  ಅತಿಥಿ ಉಪನ್ಯಾಸಕರ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸರ್ಕಾರಕ್ಕೆ ಮನವಿ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ರಾಜ್ಯ ಸಮನ್ವಯ ಸಮಿತಿ ಜಿಲ್ಲಾ ಪದಾಧಿಕಾರಿಗಳಿಂದ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ರಾಜ್ಯ ಸಮನ್ವಯ ಸಮಿತಿ ಜಿಲ್ಲಾ ಪದಾಧಿಕಾರಿಗಳಿಂದ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದರು. ಲಾಕ್ ಡೌನ್ ಅವಧಿಯನ್ನು ಕರ್ತವ್ಯವೆಂದು ಪರಿಗಣಿಸಿ ಸಂಬಳ ನೀಡಬೇಕು. ಆತ್ಮಹತ್ಯೆ ಮಾಡಿಕೊಂಡ ಮಂಡ್ಯ ಜಿಲ್ಲೆಯ ಇಬ್ಬರು ಅತಿಥಿ ಉಪನ್ಯಾಸಕ ಕುಟುಂಬಗಳಿಗೆ ತಲಾ 10 ಲಕ್ಷ ಪರಿಹಾರ ನೀಡಬೇಕು.appeal-government-demands-guest-lecturers

ಜೊತೆಗೆ ಅತಿಥಿ ಉಪನ್ಯಾಸಕರಿಗೆ ಉದ್ಯೋಗ ಭದ್ರತೆ ಜೊತೆ ವೈದ್ಯಕೀಯ ಸೌಲಭ್ಯ ಹಾಗೂ ಭವಿಷ್ಯ ನಿಧಿ ನೀಡುವಂತೆ ಪತ್ರದ ಮೂಲಕ ,ಅತಿಥಿ ಉಪನ್ಯಾಸಕರ ರಾಜ್ಯ ಸಮನ್ವಯ ಸಮಿತಿ ಜಿಲ್ಲಾ ಪದಾಧಿಕಾರಿಗಳು ಮನವಿ ಮಾಡಿದ್ದಾರೆ.

Key words: Appeal – Government – – demands – guest lecturers