Tuesday, August 11, 2026

BDA Apartments

Home Front Page ಮತ್ತೆ ಪರಿಷತ್ ಸ್ಥಾನಕ್ಕೆ ಆಸೆ ವ್ಯಕ್ತಪಡಿಸಿದ ಹಳ್ಳಿಹಕ್ಕಿ ಹೆಚ್.ವಿಶ್ವನಾಥ್…

ಮತ್ತೆ ಪರಿಷತ್ ಸ್ಥಾನಕ್ಕೆ ಆಸೆ ವ್ಯಕ್ತಪಡಿಸಿದ ಹಳ್ಳಿಹಕ್ಕಿ ಹೆಚ್.ವಿಶ್ವನಾಥ್…

ಮೈಸೂರು,ಜೂ,20,2020(www.justkannada.in):  ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿಯಿಂದ ಟಿಕೆಟ್ ಕೈತಪ್ಪಿದ ಬಳಿಕ ಮಾಜಿ ಸಚಿವ ಹೆಚ್.ವಿಶ್ವನಾಥ್ ಇದೀಗ ಮತ್ತೆ ಪರಿಷತ್ ಸ್ಥಾನಕ್ಕೆ ಆಸೆ ವ್ಯಕ್ತಪಡಿಸಿದ್ದಾರೆ.

ಪರಿಷತ್ ಟಿಕೆಟ್ ಕೈ ತಪ್ಪಿದ್ದಕ್ಕೆ ನನಗೆ ಬೇಸರ ಇಲ್ಲ. ನಾಮನಿರ್ದೇಶನದ ಮೂಲಕ ಪರಿಷತ್ ಸ್ಥಾನಕ್ಕೆ ನನ್ನನ್ನು ಆಯ್ಕೆ ಮಾಡುವ ವಿಶ್ವಾಸ ಇದೆ. ಮುಖ್ಯಮಂತ್ರಿಗಳು ಈ ಬಗ್ಗೆ ಭರವಸೆ ಕೊಟ್ಟಿದ್ದಾರೆ ಎಂದು ಹಳ್ಳಿಹಕ್ಕಿ ಹೆಚ್.ವಿಶ್ವನಾಥ್ ಹೇಳಿದ್ದಾರೆ.

ಮೈಸೂರಿನಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಮಾಜಿ ಸಚಿವ ಹೆಚ್.ವಿಶ್ವನಾಥ್, ವಿಧಾನ ಪರಿಷತ್ ಟಿಕೆಟ್ ಕೈ ತಪ್ಪಿದ್ದಕ್ಕೆ ಬೇಸರ ಇಲ್ಲ. ತಳಮಟ್ಟದ ಕಾರ್ಯಕರ್ತರಿಗೆ ಟಿಕೆಟ್ ಕೊಟ್ಟಿರೋದು. ಕೆಲವೊಮ್ಮೆ ನಾವು ಅಂದುಕೊಂಡಿದ್ದಕ್ಕಿಂತ ದೊಡ್ಡದು ಸಿಗುತ್ತೆ. ಕೆಲವೊಮ್ಮೆ ಏನೂ ಸಿಗೋದೆ ಇಲ್ಲ. ರಾಜಕಾರಣ ಅಂದ್ರೆ ಸಿಗೋದು, ಪಡೆದುಕೊಳ್ಳೋದಲ್ಲ. ನಾನೋಬ್ಬ ಬರಹಗಾರ, ನನ್ನ ಪುಸ್ತಕಗಳು ರಾಜಕೀಯಕ್ಕೆ ಸಂಬಂಧಪಟ್ಟಿವೆ. ಲಂಡನ್ ಪಾರ್ಲಿಮೆಂಟ್ ಬಗ್ಗೆ ಪುಸ್ತಕ ಬರೆದಿದ್ದೇನೆ. ಈ ಹಿನ್ನೆಲೆಯಲ್ಲಿ ಸಾಹಿತ್ಯ ಲೋಕದಿಂದ ನನ್ನನ್ನ ಆಯ್ಕೆ ಮಾಡಿ ಎಂದು ಮನವಿ‌‌ ಮಾಡಿದ್ದೇನೆ. ಸಿಎಂ ಇದಕ್ಕೆ ಒಪ್ಪಿದ್ದು ಆಗಬಹುದು ಎಂದು ಹೇಳಿದ್ದಾರೆ ಎಂದು ತಿಳಿಸಿದರು.

ನನ್ನನ್ನ ನಾಮನಿರ್ದೇಶನ ಮಾಡಲು ಯಾವುದೇ ಕಾನೂನಿನ ತೊಡಕಿಲ್ಲ. ಮೆಲ್ಮನೆಗೆ ಆಯ್ಕೆಯಾಗುವುದಕ್ಕೆ ಯಾವುದೇ ಅಡ್ಡಿ ಇಲ್ಲ‌. ಸಾಹಿತ್ಯ ಕ್ಷೇತ್ರದಿಂದ ನನ್ನನ್ನು ನಾಮ ನಿರ್ದೇಶನ ಮಾಡುವ ವಿಶ್ವಾಸ ಇದೆ. ಈ ರಾಜ್ಯದಲ್ಲಿ ನಾಲಿಗೆ ಮೇಲೆ ನಿಂತ ನಾಯಕ ಅಂದ್ರೆ ಅದು ಯಡಿಯೂರಪ್ಪ. ಆ ಮಾತಿಗೆ ಈಗಲು ನಾನು ಬದ್ಧ ಎಂದು ಹೆಚ್.ವಿಶ್ವನಾಥ್  ಹೇಳಿದರು.mysore-h-vishwanath-legislative-council-position

ಇನ್ನೇನಿದ್ದರೂ ಹೆಚ್. ವಿಶ್ವನಾಥ್ ಗ್ರಾಮ ಪಂಚಾಯತಿ ಜಿಲ್ಲಾಪಂಚಾಯತಿ ನೊಡ್ಕೊಬೇಕು  ಎಂಬ ಶಾಸಕ ಸಾ ರಾ ಮಹೇಶ್ ಹೇಳಿಕೆಗೆ ತಿರುಗೇಟು ನೀಡಿದ ಹೆಚ್.ವಿಶ್ವನಾಥ್, ಕೊಚ್ಚೆಗುಂಡಿಗೆ ಕಲ್ಲೆಸಯುವ ಪ್ರಯತ್ನ ಮಾಡಲ್ಲ. ನಾನು ಪ್ರತಿಕ್ರಿಯೆ ನೀಡಲ್ಲ ಎಂದರು.

Key words: mysore- H.Vishwanath-legislative council-position