Saturday, October 10, 2026

Dasara Wishes

ಗೂಗಲ್ ಕಂಪನಿ ಜತೆ VTU ಶೈಕ್ಷಣಿಕ ಒಪ್ಪಂದ: ಕುಲಪತಿ ಪ್ರೊ.ಎಸ್.ವಿದ್ಯಾಶಂಕರ್ ಸಹಿ ...
Happy Dasara
Home Front Page ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಸಚಿವ ನಾರಾಯಣಗೌಡರಿಂದ ಮಾಸ್ಕ್, ಸ್ಯಾನಿಟೈಸರ್ ವಿತರಣೆ…

ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಸಚಿವ ನಾರಾಯಣಗೌಡರಿಂದ ಮಾಸ್ಕ್, ಸ್ಯಾನಿಟೈಸರ್ ವಿತರಣೆ…

ಮಂಡ್ಯ,ಜೂ,20,2020(www.justkannada.in):  ಜೂನ್ 25 ರಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ ಪ್ರಾರಂಭವಾಗಲಿದ್ದು ಈ ನಡುವೆ  ಪರೀಕ್ಷೆ ಬರೆಯಲಿರುವ ಮೆಟ್ರಿಕ್ ವಿದ್ಯಾರ್ಥಿಗಳಿಗೆ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಡಾ| ನಾರಾಯಣಗೌಡ ಮಾಸ್ಕ್, ಸ್ಯಾನಿಟೈಸರ್ ವಿತರಿಸಿದರು.

ಇಂದು ಕೆಆರ್ ಪೇಟೆ ತಾಲ್ಲೂಕಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ, ವಿದ್ಯಾರ್ಥಿಗಳಿಗೆ ಸಚಿವ ನಾರಾಯಣಗೌಡ ಅವರು ಮಾಸ್ಕ್ ಹಾಗೂ ಸ್ಯಾನಿಟೈಸರ್ ನೀಡಿದರು.minister-narayanagwoda-students-sslc-examination-distribution-mask

ಕೆ.ಆರ್. ಪೇಟೆ ತಾಲ್ಲೂಕಿನಲ್ಲಿ 9 ಕೇಂದ್ರದಲ್ಲಿ ಪರೀಕ್ಷೆ ನಡೆಯಲಿದ್ದು, ಸುಮಾರು 3 ಸಾವಿರ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. SSLC ಪರೀಕ್ಷೆ ಬರೆಯಲಿರುವ ತಾಲೂಕಿನ ಎಲ್ಲ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರದಲ್ಲಿ ಕಡ್ಡಾಯವಾಗಿ ಮಾಸ್ಕ್, ಸ್ಯಾನಿಟೈಸರ್ ನೀಡುವಂತೆ ಸಚಿವ ನಾರಾಯಣಗೌಡ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

Key words: Minister – narayanagwoda-  students – SSLC -examination – distribution – mask.