Sunday, August 16, 2026

BDA Apartments

Home Front Page ಸುಮಲತಾ ಅಂಬರೀಶ್ ಗೆದ್ದಿರುವುದು ನಮ್ಮ ಬೆಂಬಲದಿಂದ- ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿಕೆ…

ಸುಮಲತಾ ಅಂಬರೀಶ್ ಗೆದ್ದಿರುವುದು ನಮ್ಮ ಬೆಂಬಲದಿಂದ- ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿಕೆ…

ಶಿವಮೊಗ್ಗ,ಜೂ,1,2019(www.justkannada.in): ನಮ್ಮ ಬೆಂಬಲದಿಂದ ಪಕ್ಷೇತರ ಸಂಸದೆ ಸುಮಲತಾ ಅಂಬರೀಶ್  ಮಂಡ್ಯದಲ್ಲಿ ಗೆದ್ದಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

ಶಿವಮೊಗ್ಗದಲ್ಲಿ ಇಂದು ಮಾಧ್ಯಮದ ಜತೆ ಮಾತನಾಡಿದ ಬಿಎಸ್ ಯಡಿಯೂರಪ್ಪ, ಶಿವಮೊಗ್ಗದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ ರಾಘವೇಂದ್ರ ಮೈತ್ರಿ ಅಭ್ಯರ್ಥಿ ಎದುರು ಭಾರಿ ಅಂತರದಿಂದ ಗೆಲುವು ಸಾಧಿಸಿದರು. ಆದರೆ ಗೆಲುವು ಅಸಾಧ್ಯ ಎಂದು ಅಪಪ್ರಚಾರ ನಡೆದಿತ್ತು. ಇದಕ್ಕೆ ಜನತೆ ತಕ್ಕ ಉತ್ತರ ನೀಡಿದ್ದಾರೆ.  ತಮ್ಮ ಪುತ್ರನ ಗೆಲುವಿಗೆ ಈಶ್ವರಪ್ಪ ಕಾರಣ ಎಂದು ಬಿ ಹೇಳಿದರು.

ರಾಜ್ಯದಿಂದ 25 ಬಿಜೆಪಿ ಸಂಸದರು ಆಯ್ಕೆಯಾಗಿದ್ದಾರೆ. ನಾವು ಪ್ರಯತ್ನ ಮಾಡಿದರೇ ಹಾಸನದಲ್ಲೂ ಗೆಲ್ಲಬಹುದಿತ್ತು. ಪರಿಶಿಷ್ಟ ಜಾತಿ ಹಾಗೂ ವರ್ಗಕ್ಕೆ ಮೀಸಲಿಟ್ಟಿದ್ದ 7 ಕ್ಷೇತ್ರಗಳಲ್ಲಿಯೂ ಕೂಡ ನಾವೇ ಗೆಲುವು ಸಾಧಿಸಿರುವುದು ವಿಶೇಷ. ನಾವು ಬೆಂಬಲ ನೀಡಿದ ಸುಮಲತಾ ಅಂಬರೀಶ್ ಚುನಾವಣೆಯಲ್ಲಿ ಗೆದ್ದಿರುವುದು ಇತಿಹಾಸದಲ್ಲಿ ದಾಖಲೆಯಾಗಿದೆ. ಎಂದು ಹೇಳಿದರು.

ರಾಜ್ಯದ ನಾಲ್ವರಿಗೆ ಕೇಂದ್ರದಲ್ಲಿ ಸಚಿವ ಸಂಪುಟದಲ್ಲಿ ಅವಕಾಶ ಸಿಕ್ಕಿದೆ. ದೇಶದ ಎಲ್ಲ ರೈತರಿಗೆ 6 ಸಾವಿರ ರೂಪಾಯಿ ನೀಡುವ ಐತಿಹಾಸಿಕ ತೀರ್ಮಾನವನ್ನು ಪ್ರಧಾನಿ ತೆಗೆದುಕೊಂಡಿದ್ದಾರೆ. ನರೇಂದ್ರ ಮೋದಿ ಅವರನ್ನು ನಾನು ಅಭಿನಂದಿಸುತ್ತೇನೆ ಎಂದು ಬಿಎಸ್ ವೈ ಹೇಳಿದರು.

ಇನ್ನು ರಾಜ್ಯ ರಾಜಕಾರಣದ ಬಗ್ಗೆಯೂ ಪ್ರಸ್ತಾಪಿಸಿದ ಅವರು ನಾವು ಸ್ವಲ್ಪ ದಿನಗಳ ಕಾಲ ನಾವು ಶಾಂತವಾಗಿರುತ್ತೇವೆ. ಮೈತ್ರಿ ಸರ್ಕಾರ ಅವರ ಕಚ್ಚಾಟದಿಂದಲೇ ಬಿದ್ದು ಹೋಗುತ್ತದೆ. ಅವರೇ ಬಡಿದಾಡಿಕೊಳ್ಳುತ್ತಿದ್ದಾರೆ. ಅವರೇ ಕಚ್ಚಾಡಿಕೊಂಡು ನಂತರ ಸರ್ಕಾರ ಬೀಳುತ್ತದೆ ಎಂದರು.

Key words: Sumalantha Ambarish won by our support-Former CM BS Yeddyurappa

#shivamogga #bsyeddyurappa #sumalathaambarish