Friday, August 14, 2026

BDA Apartments

Home Front Page ಆರಂಭಿಕ ಹಂತದಲ್ಲೇ ಕೋವಿಡ್-19 ನಿರ್ವಹಣೆಯಲ್ಲಿ ಸರ್ಕಾರ ಸಂಪೂರ್ಣ ವಿಫಲ- ಟ್ವಿಟ್ಟರ್ ನಲ್ಲಿ ಮಾಜಿ ಸಿಎಂ ಹೆಚ್.ಡಿ...

ಆರಂಭಿಕ ಹಂತದಲ್ಲೇ ಕೋವಿಡ್-19 ನಿರ್ವಹಣೆಯಲ್ಲಿ ಸರ್ಕಾರ ಸಂಪೂರ್ಣ ವಿಫಲ- ಟ್ವಿಟ್ಟರ್ ನಲ್ಲಿ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ವಾಗ್ದಾಳಿ…

ಬೆಂಗಳೂರು,ಜು,2,2020(www.justkannada.in): ಕೊರೋನಾ ಸೋಂಕು ಪೀಡಿತರು ಬೆಡ್ ಗಳಿಲ್ಲದೆ, ಚಿಕಿತ್ಸೆ ಇಲ್ಲದೆ ಮನೆಯಲ್ಲೇ ನರಳಿ ಸಾಯುತ್ತಿದ್ದಾರೆ. ಆರಂಭಿಕ ಹಂತದಲ್ಲೇ ಕೋವಿಡ್-19 ನಿರ್ವಹಣೆಯಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ  ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.

ಟ್ವಿಟ್ಟರ್ ನಲ್ಲಿ ಟ್ವೀಟ್ ಮಾಡಿ ರಾಜ್ಯ ಸರ್ಕಾರದ ವಿರುದ್ದ ಆಕ್ರೋಶ ಹೊರ ಹಾಕಿರುವ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಕೊರೋನಾ ಸೋಂಕು ಪೀಡಿತರು ಬೆಡ್ ಗಳಿಲ್ಲದೆ, ಚಿಕಿತ್ಸೆ ಇಲ್ಲದೆ ಮನೆಯಲ್ಲೇ ನರಳಿ ಸಾಯುತ್ತಿದ್ದಾರೆ. ಆರಂಭಿಕ ಹಂತದಲ್ಲೇ ಕೋವಿಡ್-19 ನಿರ್ವಹಣೆಯಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಕಳೆದ ಮೂರು ತಿಂಗಳಿಂದ ಮುಖ್ಯಮಂತ್ರಿ ಸೇರಿದಂತೆ ಸಚಿವರುಗಳು ಮಾತಿನ ಮಂಟಪ ಕಟ್ಟುವುದರಲ್ಲಿ ಕಾಲ ಕಳೆದರು ಎಂದು ಹರಿಹಾಯ್ದಿದಿದ್ದಾರೆ.

ಮತ್ತೊಂದು ಟ್ವಿಟ್ಟರ್ ನಲ್ಲಿ ಸರ್ಕಾರದ ವಿರುದ್ದ ಲೇವಡಿ ಮಾಡಿರುವ ಹೆಚ್.ಡಿಕೆ, ಸರ್ಕಾರ ಈಗ ಇಂಗು ತಿಂದ ಮಂಗನಂತಾಗಿದ್ದು, ಸೋಂಕಿತರ ಸಂಖ್ಯೆಯ ಗಣನೀಯ ಏರಿಕೆಯನ್ನು ತಡೆಯಲು ಪೇಚಾಡುತ್ತಿದೆ. ನೆರೆಯ ಕೇರಳ ಸರ್ಕಾರ ಕೊರೋನ ತಡೆಗೆ ಕೈಗೊಂಡ ಕ್ರಮಗಳ ‘ಸಿದ್ದ’ ಮಾದರಿ ಕಣ್ಣೆದುರಿಗಿದೆ. ರಾಜ್ಯದ ಸಚಿವರಲ್ಲಿ ಸಮನ್ವಯವಿಲ್ಲ, ಒಬ್ಬೊಬ್ಬರದು ಒಂದೊಂದು ನಿಲುವು. ಇವರ ತಿಕ್ಕಾಟದಲ್ಲಿ ರಾಜ್ಯದ ಜನತೆ ಹೈರಾಣಾಗಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.government-failure-manage-covid-19-former-cm-hd-kumaraswamy

ಸರ್ಕಾರ ಇನ್ನೂ ಮೈಮರೆತರೆ ಸೋಂಕಿತರು ಬೀದಿ ಬೀದಿಯಲ್ಲಿ ಸಾಯುವ ಸ್ಥಿತಿ ನಿರ್ಮಾಣವಾಗುತ್ತೆ…

ಇನ್ನೊಂದು ಟ್ವೀಟ್ ಮಾಡಿ ಸರ್ಕಾರಕ್ಕೆ ಎಚ್ಚರಿಕೆ ನೀಡಿರುವ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಕೊರೋನಾ ಸೋಂಕು ಶರವೇಗದಲ್ಲಿ ಎಲ್ಲೆಡೆ  ವ್ಯಾಪಿಸುತ್ತಿರುವ ಪ್ರಸಕ್ತ ಸನ್ನಿವೇಶದಲ್ಲಿ ರಾಜ್ಯದಾದ್ಯಂತ  ಸೋಂಕಿತರು ಚಿಕಿತ್ಸೆಯಿಲ್ಲದೆ ಸಾಯುತ್ತಿರುವ  ಘಟನೆಗಳು ಕರುಳು ಹಿಂಡುತ್ತಿವೆ. ಸರ್ಕಾರ ಇನ್ನೂ ಮೈಮರೆತರೆ ಸೋಂಕಿತರು ಬೀದಿ ಬೀದಿಯಲ್ಲಿ ಸಾಯುವ ಸ್ಥಿತಿ ನಿರ್ಮಾಣವಾಗುತ್ತದೆ. ಸರ್ಕಾರ ಇನ್ನಾದರೂ ಸಮರೋಪಾದಿಯಲ್ಲಿ  ಕಾರ್ಯಪ್ರವೃತ್ತವಾಗಲಿ. ಕೊರೋನಾ ಸಮರ್ಪಕ ನಿರ್ವಹಣೆಗೆ ನಾನು ಕೊಟ್ಟ ಹತ್ತಾರು ಸಲಹೆಗಳನ್ನು ಲಘುವಾಗಿ ಪರಿಗಣಿಸಿದ ರಾಜ್ಯ ಸರ್ಕಾರ ಇನ್ನಾದರೂ ಎಚ್ಚೆತ್ತುಕೊಳ್ಳಲಿ ಎಂದು ಸಲಹೆ ನೀಡಿದ್ದಾರೆ.

Key words: government – failure – manage- covid-19 –  Former CM -HD Kumaraswamy