Monday, October 5, 2026

BDA Apartments

ನಾಡು ಕಂಡ ಶ್ರೇಷ್ಠ ಮುತ್ಸದ್ಧಿ ರಾಜಕಾರಣಿ ಎಸ್.ಎಂ ಕೃಷ್ಣ: ಅವರ ಆಡಳಿತ ವೈಖರಿ ರ...
Home Front Page ಬೆಂಗಳೂರಿನಲ್ಲಿ ಮಹಾಮಾರಿ ಕೊರೋನಾಗೆ ಕಾಂಗ್ರೆಸ್ ಮುಖಂಡ ಬಲಿ…

ಬೆಂಗಳೂರಿನಲ್ಲಿ ಮಹಾಮಾರಿ ಕೊರೋನಾಗೆ ಕಾಂಗ್ರೆಸ್ ಮುಖಂಡ ಬಲಿ…

ಬೆಂಗಳೂರು,ಜು.,10,2020(www.justkannada.in):  ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೊರೋನಾ ಅಬ್ಬರ ಜೋರಾಗಿದ್ದು ಈ ನಡುವೆ ಕೊರೋನಾ ಸೋಂಕಿಗೆ ಕಾಂಗ್ರೆಸ್ ಮುಖಂಡರೊಬ್ಬರು ಸಾವನ್ನಪ್ಪಿದ್ದಾರೆ.jk-logo-justkannada-logo

ಕಾಂಗ್ರೆಸ್ ಶಾಸಕ ಜಮೀರ್ ಅಹಮ್ಮದ್ ಖಾನ್ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ 53 ವರ್ಷದ ವ್ಯಕ್ತಿ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಮೃತ ಸೋಂಕಿತ ವ್ಯಕ್ತಿ ರಾಯಪುರ ವಾರ್ಡ್‍ನಲ್ಲಿ ಕಾಂಗ್ರೆಸ್ ಮುಖಂಡರಾಗಿದ್ದಾರೆ. ಉಸಿರಾಟ ತೊಂದರೆಯಿಂದಾಗಿ ಸೋಂಕಿತ ವ್ಯಕ್ತಿ ಬೃಂದಾವನ ಆಸ್ಪತ್ರೆಗೆ ಭೇಟಿ ನೀಡಿದ್ದರು. ಅಲ್ಲಿ ಗಂಟಲು ದ್ರವ ಸಂಗ್ರಹಿಸಲಾಗಿತ್ತು. ನಂತರ ಅಲ್ಲಿಂದ ವ್ಯಕ್ತಿ ಲೀಲಾವತಿ ಆಸ್ಪತ್ರೆಗೆ ತೆರಳಿದ್ದು ಬೆಡ್ ಸಿಗುವಷ್ಟರಲ್ಲಿ ವ್ಯಕ್ತಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ಚಾಮರಾಜಪೇಟೆ ಭಾಗದಲ್ಲಿ ಕೊರೊನಾ ಪೀಡಿತರ ಸಂಖ್ಯೆ ಹೆಚ್ಚಾಗಿದ್ದು, ಹಲವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರ ನಡುವೆ ಇಂದು ಒಬ್ಬರು ಮೃತಪಟ್ಟಿರುವುದು ಆತಂಕವನ್ನು ಹೆಚ್ಚಿಸಿದೆ. ರಾಜ್ಯದಲ್ಲಿ ಬೆಳಗಾವಿಯಲ್ಲಿ 61 ವರ್ಷದ ವೃದ್ಧೆ, ಹಾಗೂ 44 ವರ್ಷದ ಮಹಿಳೆ ಕೊರೋನಾಗೆ ಮೃತಪಟ್ಟಿದ್ದಾರೆ. ಹಾಗೆಯೇ ಗದಗದಲ್ಲಿ  ಚಿಕಿತ್ಸೆ ಫಲಿಸದೆ 51 ವರ್ಷದ ಮಹಿಳೆ ಸಾವನ್ನಪ್ಪಿದ್ದಾರೆ..

Key words: Congress leader –death– Corona – Bangalore