Friday, August 21, 2026

BDA Apartments

Home Front Page ಸಂಪುಟದಲ್ಲಿ ಯಾವುದೇ ಗೊಂದಲವೂ ಇಲ್ಲ: ಯಾರಲ್ಲೂ ಸಮನ್ವಯತೆ ಕೊರತೆ ಇಲ್ಲ-ಸಚಿವ ಎಸ್ ಟಿ ಸೋಮಶೇಖರ್

ಸಂಪುಟದಲ್ಲಿ ಯಾವುದೇ ಗೊಂದಲವೂ ಇಲ್ಲ: ಯಾರಲ್ಲೂ ಸಮನ್ವಯತೆ ಕೊರತೆ ಇಲ್ಲ-ಸಚಿವ ಎಸ್ ಟಿ ಸೋಮಶೇಖರ್

ಬೆಂಗಳೂರು,ಜು,14,2020(www.justkannada.in): ರಾಜ್ಯ ಸಚಿವ ಸಂಪುಟ ಸದಸ್ಯರಲ್ಲಿ ಯಾವುದೇ ಗೊಂದಲ ಇಲ್ಲ. ಸಮನ್ವಯದ ಕೊರತೆಯೂ ಇಲ್ಲ. ಎಲ್ಲರೂ ಒಗ್ಗಟ್ಟಾಗಿ ಕಾರ್ಯನಿರ್ವಹಣೆ ಮಾಡುತ್ತಿದ್ದಾರೆ ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಹೇಳಿದರು.jk-logo-justkannada-logo

ಇಂದು ಮಾಧ್ಯಮಗಳ ಜತೆ ಮಾತನಾಡಿದ ಸಚಿವ ಎಸ್.ಟಿ ಸೋಮಶೇಖರ್, ವಿರೋಧ ಪಕ್ಷದವರು ಸುಮ್ಮನೆ ವಿರೋಧ ಮಾಡಬೇಕು ಎಂದು ಮಾಡುತ್ತಿದ್ದಾರೆ. ಇಲ್ಲಿ ಯಾರಲ್ಲೂ ಸಮನ್ವಯತೆ ಕೊರತೆ ಕಾಡುತ್ತಿಲ್ಲ. ಎಲ್ಲ ಸಚಿವರೂ ಜಿಲ್ಲಾ ಪ್ರವಾಸ ಕೈಗೊಂಡು ಅಭಿವೃದ್ಧಿ ಕೆಲಸ ಮಾಡುತ್ತಿದ್ದಾರೆ. ಎಲ್ಲರೂ ಉತ್ತಮವಾಗಿ ಕಾರ್ಯನಿರ್ವಹಣೆ ಮಾಡುತ್ತಿದ್ದಾರೆ ಎಂದು ಸ್ಪಷ್ಟನೆ ನೀಡಿದರು.

ಮಾಜಿ ಸಿಎಂ ಸಿದ್ಧರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್  ಆರೋಪಕ್ಕೆ ತಿರುಗೇಟು ನೀಡಿದ ಸಚಿವ ಎಸ್.ಟಿ ಸೋಮಶೇಖರ್, ಸರ್ಕಾರ ಜನರ ಪ್ರಾಣ ರಕ್ಷಣೆಗೆ ಏನೆಲ್ಲ ಮಾಡಬೇಕು ಎಂಬ ಬಗ್ಗೆ ಕಾನೂನುಬದ್ಧವಾಗಿ ಮಾಡುತ್ತಿದೆ. ಇಲ್ಲಿ ಯಾವುದೇ ಅವ್ಯವಹಾರ ನಡೆದಿಲ್ಲ. ಇದಕ್ಕೆ 550 ಕೋಟಿ ರೂಪಾಯಿ ಮಾತ್ರ ಖರ್ಚಾಗಿದೆ. ಸುಮ್ಮನೆ 1200 ಕೋಟಿ ರೂಪಾಯಿ ಖರ್ಚಾಗಿದೆ ಎಂದು ಹೇಳುತ್ತಾರೆ. ವಿಧಾನಸೌಧಕ್ಕೆ ಬರಲಿ, ಪರಿಶೀಲನೆ ನಡೆಸಲಿ ಎಂದು ಹೇಳಿದರು.no-confusion-coordination-minister-s-t-somashekhar

ಇಡೀ ರಾಜ್ಯದಲ್ಲಿ ಲಾಕ್ ಡೌನ್ ಮಾಡುವಂತೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಆಗ್ರಹಿಸಿರುವ ಕುರಿತು ಪ್ರತಿಕ್ರಿಯಿಸಿದ ಸಚಿವ ಎಸ್.ಟಿ ಸೋಮಶೇಖರ್, ರಾಜ್ಯಾದ್ಯಂತ ಲಾಕ್ ಡೌನ್ ಮಾಡುವ ಇಂಗಿತ ರಾಜ್ಯ ಸರ್ಕಾರಕ್ಕಿಲ್ಲ. ಹಾಗಂತ ಪರಿಸ್ಥಿತಿಯ ತೀವ್ರತೆಯನ್ನು ನೋಡಿಕೊಂಡು ಆಯಾ ಜಿಲ್ಲೆಗಳ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಧಿಕಾರಿಗಳು ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳಬಹುದು. ಲಾಕ್ ಡೌನ್ ವಿಷಯದಲ್ಲಿ ಸಂಪೂರ್ಣ ಅಧಿಕಾರವನ್ನು ಈಗಾಗಲೇ ಮುಖ್ಯಮಂತ್ರಿಗಳು ನೀಡಿದ್ದಾರೆ ಎಂದು ತಿಳಿಸಿದರು.

Key words: no confusion – coordination – Minister -S T Somashekhar.