Tuesday, October 13, 2026

Dasara Wishes

Happy Dasara
Home Cinema ಸರಕಾರಿ ಶಾಲೆ ದತ್ತು ಪಡೆದ ಸುದೀಪ್ ಗೆ ಅಭಿನಂದನೆ ಸುರಿಮಳೆ!

ಸರಕಾರಿ ಶಾಲೆ ದತ್ತು ಪಡೆದ ಸುದೀಪ್ ಗೆ ಅಭಿನಂದನೆ ಸುರಿಮಳೆ!

ಬೆಂಗಳೂರು, ಜುಲೈ 16, 2020 (www.justkannada.in): ನಟ ಕಿಚ್ಚ ಸುದೀಪ್ ಸರ್ಕಾರಿ ಶಾಲೆಗಳನ್ನು ದತ್ತು ಪಡೆಯುವ ಮೂಲಕ ಅನೇಕರಿಗೆ ಮಾದರಿಯಾಗಿದ್ದಾರೆ.

ಸುದೀಪ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನಾಲ್ಕು ಶಾಲೆಗಳನ್ನು ದತ್ತು ಪಡೆದಿದ್ದಾರೆ. ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಮೂರು ಹಾಗೂ ಹಿರಿಯೂರು ತಾಲೂಕಿನ ಒಂದು ಸರ್ಕಾರಿ ಶಾಲೆಯನ್ನು ದತ್ತು ಪಡೆಯಲಾಗಿದೆ.

ಒಬವನಹಳ್ಳಿ, ಚಳ್ಳಕೆರೆ ಶಾಲೆ, ಪರುಶರಾಂಪುರ ಶಾಲೆ ಮತ್ತು ಚಿತ್ರದುರ್ಗದ ಶಾಲೆಯನ್ನು ದತ್ತು ಪಡೆದು ಶಾಲೆಯ ಸಂಪೂರ್ಣ ಅಭಿವೃದ್ಧಿಯನ್ನು ವಹಿಸಿಕೊಂಡಿದ್ದಾರೆ.

ಈ ಶಾಲೆಗಳಿಗೆ ಬೇಕಾದ ಅಗತ್ಯ ಸೌಕರ್ಯಗಳನ್ನು ನೀಡುವುದಕ್ಕೆ ಟ್ರಸ್ಟ್ ಮುಂದಾಗಿದೆ. ಸುದೀಪ್ ಅವರ ಸಾಮಾಜಿಕ ಕಾರ್ಯಕ್ಕೆ ಸೋಶಿಯಲ್ ಮೀಡಿಯಾದಲ್ಲಿ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.