Thursday, October 15, 2026

Dasara Wishes

Happy Dasara
Home Front Page ಹೆಚ್.ವಿಶ್ವನಾಥ್ ರಾಜೀನಾಮೆ ವಿಚಾರ: ಸಚಿವ ಸಾ.ರಾ ಮಹೇಶ್ ಪ್ರತಿಕ್ರಿಯಿಸಿದ್ದು ಹೀಗೆ…?

ಹೆಚ್.ವಿಶ್ವನಾಥ್ ರಾಜೀನಾಮೆ ವಿಚಾರ: ಸಚಿವ ಸಾ.ರಾ ಮಹೇಶ್ ಪ್ರತಿಕ್ರಿಯಿಸಿದ್ದು ಹೀಗೆ…?

ಮೈಸೂರು,ಜೂ,4,2019(www.justkannada.in):  ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಹೆಚ್.ವಿಶ್ವನಾಥ್ ರಾಜೀನಾಮೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಸಚಿವ ಸಾ.ರಾ ಮಹೇಶ್, ವಿಶ್ವನಾಥ್ ಅವ್ರಿಗೆ ರಾಜೀನಾಮೆ ಹಿಂಪಡೆಯುವಂತೆ ಮನವೊಲಿಸುತ್ತೇವೆ ಎಂದು ಹೇಳಿದ್ದಾರೆ.

ಮೈಸೂರಿನಲ್ಲಿ ಇಂದು ಮಾತನಾಡಿದ ಸಚಿವ ಸಾ.ರಾ ಮಹೇಶ್,  ವಿಶ್ವನಾಥ್ ರಾಜೀನಾಮೆ ಬಗ್ಗೆ ನನಗೆ ಮಾಹಿತಿ ಇಲ್ಲ. ಇವತ್ತು ಜೆ.ಡಿ.ಎಸ್ ಪಕ್ಷದ ಸಭೆ ಇದೆ. ಮೈಸೂರು ಕಾರ್ಯಕ್ರಮಗಳನ್ನು ಮುಗಿಸಿ ಬೆಂಗಳೂರಿಗೆ ತೆರಳುತ್ತೇನೆ. ವಿಶ್ವನಾಥ್ ಹಾಗೂ ಪಕ್ಷದ ವರಿಷ್ಠರ ಜೊತೆ ಮಾತನಾಡುತ್ತೇನೆ ಎಂದರು.

ಇಂದು ಸಂಜೆ ಬೆಂಗಳೂರಿನಲ್ಲಿ ಜೆಡಿಎಸ್ ಸಭೆ ಇದೆ. ಆ ಸಭೆಯಲ್ಲಿ ವಿಶ್ವನಾಥ್ ಅವ್ರ ಬಗ್ಗೆ ಚರ್ಚೆ ಮಾಡುತ್ತೇವೆ. ಹೆಚ್.ವಿಶ್ವನಾಥ್ ರ ರಾಜೀನಾಮೆ ಅಂಗೀಕರಿಸದಂತೆ ಮನವಿ ಮಾಡುತ್ತೇವೆ. ವಿಶ್ವನಾಥ್ ಅವರಿಗೆ ರಾಜೀನಾಮೆ ಹಿಂಪಡೆಯುವಂತೆ ಮನವೊಲಿಸುತ್ತೇವೆ. ವಿಶ್ವನಾಥ್ ಆಗಲಿ ಜಿ.ಟಿ.ದೇವೇಗೌಡರ ಬಗ್ಗೆ ಎಳ್ಳಷ್ಟು ಅನುಮಾನ ಬೇಡ. ಅವ್ರು ಪಕ್ಷ ಬಿಡುವ ಬಗ್ಗೆ ಯಾವುದೇ ಅನುಮಾನ ಬೇಡ ಎಂದು ಸಚಿವ ಸಾ.ರಾ ಮಹೇಶ್ ತಿಳಿಸಿದರು.

Key words: Minister SaRa Mahesh responded about H. Vishwanath’s resignation

#Mysore #MinisterSaRaMahesh #responded #HVishwanath #resignation