Sunday, September 13, 2026

BDA Apartments

Home Front Page ನಿಗದಿಗಿಂತ ಹೆಚ್ಚು ಹಣ ವಸೂಲಿ ಮಾಡಿದರೆ ಖಾಸಗಿ ಆಸ್ಪತ್ರೆ ವಿರುದ್ಧ ಕ್ರಮಿನಲ್ ಕೇಸ್

ನಿಗದಿಗಿಂತ ಹೆಚ್ಚು ಹಣ ವಸೂಲಿ ಮಾಡಿದರೆ ಖಾಸಗಿ ಆಸ್ಪತ್ರೆ ವಿರುದ್ಧ ಕ್ರಮಿನಲ್ ಕೇಸ್

ಬೆಂಗಳೂರು, ಜುಲೈ 26, 2020 (www.justkannada.in): ಕೊರೊನಾ ಸೋಂಕಿತರಿಗೆ ಖಾಸಗಿ ಆಸ್ಪತ್ರೆಯಲ್ಲಿ ಹೆಚ್ಚಿನ ಹಣ ವಸೂಲು ಮಾಡಿದರೆ ಕ್ರಿಮಿನಲ್ ಕೇಸ್ ದಾಖಲಿಸಲಾಗುವುದು ಎಂದು ಐಜಿಪಿ ಡಿ.ರೂಪ ಎಚ್ಚರಿಸಿದ್ದಾರೆ.

ನಗರದ ಖಾಸಗಿ ಆಸ್ಪತ್ರೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾತನಾಡಿದ ಅವರು, ಸರ್ಕಾರದ ಸೂಚನೆಗಳ ಪಾಲಿಸಬೇಕು. ಸರಕಾರ ನಿಗದಿ ಮಾಡಿರುವಷ್ಟು ಹಣ ಪಡೆಯಬೇಕು ಎಂದು ನಿರ್ದೇಶನ ನೀಡಲಾಗಿದೆ. ಇದನ್ನು ಮೀರಿದರೆ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು ಎಂದು ತಿಳಿಸಿದ್ದಾರೆ.

ಸರ್ಕಾರ ನಿಗದಿ ಮಾಡಿರುವ ಚಿಕಿತ್ಸೆ ವೆಚ್ಚವನ್ನಷ್ಟೇ ಬಿಲ್ ಮಾಡುವಂತೆ ಸೂಚಿಸಿದ್ದೇವೆ. ಆಸ್ಪತ್ರೆಗಳಲ್ಲಿ, ರೋಗಿಗಳ ಬಳಿ ವಿಮೆ ಇದ್ದರೆ ಹೇಳಿ ಎಂದು ಹಣ ಮಾಡುವ ಆರೋಪ ಕೇಳಿಬಂದಿದೆ. ಅದರ ಬಗ್ಗೆಯೂ ಗಮನ ಹರಿಸಿದ್ದೇವೆ ಎಂದು ತಿಳಿಸಿದ್ದಾರೆ.