Sunday, September 13, 2026

BDA Apartments

Home Front Page ಮುಜರಾಯಿ ದೇವಾಲಯಗಳ ಸಿಬ್ಬಂದಿಗೆ ಗುಡ್ ನ್ಯೂಸ್ ನೀಡಿದ ಸಚಿವ ಕೋಟಾ ಶ್ರೀನಿವಾಸ ಪೂಜಾರಿ

ಮುಜರಾಯಿ ದೇವಾಲಯಗಳ ಸಿಬ್ಬಂದಿಗೆ ಗುಡ್ ನ್ಯೂಸ್ ನೀಡಿದ ಸಚಿವ ಕೋಟಾ ಶ್ರೀನಿವಾಸ ಪೂಜಾರಿ

ಮಂಗಳೂರು, ಜುಲೈ 26, 2020 (www.justkannada.in): ಮುಜರಾಯಿ ದೇವಾಲಯಗಳಲ್ಲಿ ಕೆಲಸ ನಿರ್ವಹಿಸುವ ಸಿಬ್ಬಂದಿಗೆ ವಿಮಾ ಸೌಲಭ್ಯ ಕಲ್ಪಿಸಲಾಗುವುದು ಎಂದು ಮುಜರಾಯಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದರು.

ಸುದ್ದಿಗಾರರ ಜೊತೆ ಮಾತನಾಡಿದ ಅವರು ಮುಜರಾಯಿ ಇಲಾಖಾ ವ್ಯಾಪ್ತಿಗೆ ಒಳಪಡುವ ಎಲ್ಲಾ ದೇವಾಲಯಗಳಲ್ಲಿ ಕೆಲಸ ಮಾಡುವ ಎಲ್ಲಾ ದರ್ಜೆಯ ಸಿಬ್ಬಂದಿಗಳಿಗೆ ವಿಮಾ ಸೌಲಭ್ಯ ಕಲ್ಪಿಸುವ ಬಗ್ಗೆ ಕ್ರಮಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗುವುದು ಎಂದರು.

ಮುಂದಿನ ದಿನಗಳಲ್ಲಿ ಐದು ಲಕ್ಷ ರೂ. ಮೊತ್ತದ ಆರೋಗ್ಯ ವಿಮೆ ಮತ್ತು 10 ಲಕ್ಷ ರೂ. ಮೊತ್ತದ ಜೀವ ವಿಮೆ ನೀಡಲು ಯೋಜನೆ ಸಿದ್ಧಪಡಿಸಲಾಗುತ್ತಿದೆ , ಕೇಂದ್ರ ಸರ್ಕಾರದ ಜೀವನ್‌ ಜ್ಯೋತಿ , ಸುರಕ್ಷಾ ಜ್ಯೋತಿ ವಿಮೆ ಮಾದರಿಯಲ್ಲಿ ವಿಮಾ ಸೌಲಭ್ಯ ನೀಡುವ ಬಗ್ಗೆ ಚಿಂತನೆ ಇದೆ ಎಂದು ಮಾಹಿತಿ ನೀಡಿದರು.