Saturday, August 8, 2026

BDA Apartments

Home Front Page ಬಿಜೆಪಿ ಸರ್ಕಾರದ ಬಡವರ ವಿರೋಧಿ ನೀತಿಗೆ ಇದಕ್ಕಿಂತ ಉದಾಹರಣೆ ಬೇಕೆ..? -ಟ್ವಿಟ್ಟರ್ ನಲ್ಲಿ ಮಾಜಿ ಸಿಎಂ...

ಬಿಜೆಪಿ ಸರ್ಕಾರದ ಬಡವರ ವಿರೋಧಿ ನೀತಿಗೆ ಇದಕ್ಕಿಂತ ಉದಾಹರಣೆ ಬೇಕೆ..? -ಟ್ವಿಟ್ಟರ್ ನಲ್ಲಿ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಕಿಡಿ…

ಬೆಂಗಳೂರು,ಜು,27,2020(www.justkannada.in):  ಸಿಎಸ್ ಯಡಿಯೂರಪ್ಪ ನೇತೃತ್ವದ ರಾಜ್ಯ ಬಿಜೆಪಿ ಸರ್ಕಾರ ಒಂದು ವರ್ಷ ಪೂರೈಸಿದ ಸಂಭ್ರಮದಲ್ಲಿದ್ದು ಇತ್ತ ಸರ್ಕಾರದ ಸಾಧನೆಯ ಬಗ್ಗೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಟೀಕಿಸಿದ್ದಾರೆ.bjp –govrnament-former CM-HD kumaraswamy- critisize

ಟ್ವಿಟ್ಟರ್ ನಲ್ಲಿ ಟ್ವೀಟ್ ಮಾಡಿರುವ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಐದಾರು ತಿಂಗಳಿನಿಂದ ಪಿಂಚಣಿ ಹಣ ಪಾವತಿಯಾಗದೇ ಅಂಗವಿಕಲರು, ವೃದ್ಧರು ಹಾಗೂ ವಿಧವೆಯರು ಪರಿತಪಿಸುತ್ತಿದ್ದಾರೆ. ಅಂಗವಿಕಲ, ವೃದ್ಧಾಪ್ಯ ಮತ್ತು ವಿಧವಾ ವೇತನವನ್ನು ತಕ್ಷಣ ಬಿಡುಗಡೆ ಮಾಡಲು ಸರ್ಕಾರ ತುರ್ತು ಆದೇಶ ನೀಡಬೇಕು ಎಂದು ಆಗ್ರಹಿಸಿದ್ದಾರೆ.bjp-govrnament-former-cm-hd-kumaraswamy-critisize

ಹಾಗೆಯೇ ಮತ್ತೊಂದು ಟ್ವೀಟ್ ಮಾಡಿ, ಪಿಂಚಣಿ ಹಣಕ್ಕಾಗಿ ಕಳೆದ 5 ತಿಂಗಳಿಂದ ವೃದ್ಧಾಪ್ಯ, ವಿಧವಾ ಮತ್ತು ಅಂಗವಿಕಲ ಫಲಾನುಭವಿಗಳನ್ನು  ಅಲೆದಾಡಿಸಲಾಗುತ್ತಿದೆ. ಇದು ನಾಚಿಕೆಗೇಡು. ಈ ಸರ್ಕಾರಕ್ಕೆ ಕಣ್ಣು ಮತ್ತು ಕಿವಿಗಳು ಇಲ್ಲ. ಸವಾಲುಗಳ ವರ್ಷ; ಪರಿಹಾರದ ಸ್ಪರ್ಶ ಎಂಬ ಬೀಜ ಮಂತ್ರ ಪಠಿಸುತ್ತಿರುವ ಬಿಜೆಪಿ ಸರ್ಕಾರದ ಬಡವರ ವಿರೋಧಿ ನೀತಿಗೆ ಇದಕ್ಕಿಂತ ಉದಾಹರಣೆ ಬೇಕೆ? ಅಂಗೈ ಹುಣ್ಣಿಗೆ ಕನ್ನಡಿ ಬೇಕೆ…? ಎಂದು ರಾಜ್ಯ ಸರ್ಕಾರದ ವಿರುದ್ದ ಹೆಚ್.ಡಿ ಕುಮಾರಸ್ವಾಮಿ  ಕಿಡಿಕಾರಿದ್ದಾರೆ.

Key words: bjp –govrnament-former CM-HD kumaraswamy- critisize