Tuesday, September 22, 2026

BDA Apartments

ಸುಶಾಂತ್ ಸಿಂಗ್ ಗೆಳತಿ ರಿಯಾ ವಿರುದ್ಧ ಎಫ್ ಐಆರ್ ದಾಖಲು BDA JK_Adv BDA Adv
Home Cinema ಸುಶಾಂತ್ ಸಿಂಗ್ ಗೆಳತಿ ರಿಯಾ ವಿರುದ್ಧ ಎಫ್ ಐಆರ್ ದಾಖಲು

ಸುಶಾಂತ್ ಸಿಂಗ್ ಗೆಳತಿ ರಿಯಾ ವಿರುದ್ಧ ಎಫ್ ಐಆರ್ ದಾಖಲು

ಬೆಂಗಳೂರು, ಜುಲೈ 29, 2020 (www.justkannada.in): ನಟ ಸುಶಾಂತ್ ಸಿಂಗ್ ಗೆಳತಿ ರಿಯಾ ಚಕ್ರವರ್ತಿ ವಿರುದ್ಧ ಸುಶಾಂತ್ ಸಿಂಗ್ ತಂದೆ ಕೆ ಕೆ ಸಿಂಗ್ ಪಾಟ್ನಾದ ಪೊಲೀಸ್ ಠಾಣೆಯೊಂದರಲ್ಲಿ ಎಫ್ ಐಆರ್ ದಾಖಲಿಸಿದ್ದಾರೆ.

ಆತ್ಮಹತ್ಯೆಗೆ ಪ್ರಚೋದನೆ ಸೇರಿದಂತೆ ವಿವಿಧ ಸೆಕ್ಷನ್ ಗಳ ಅಡಿಯಲ್ಲಿ ಎಫ್ ಐಆರ್ ದಾಖಲಿಸಲಾಗಿದೆ ಎಂದು ಪಾಟ್ನಾ ಸೆಂಟ್ರಲ್ ವಲಯದ ಇನ್ಸ್ ಪೆಕ್ಟರ್ ಜನರಲ್ ಸಂಜಯ್ ಸಿಂಗ್ ತಿಳಿಸಿದ್ದಾರೆ.

ಈ ತಿಂಗಳ ಆರಂಭದಲ್ಲಿ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣವನ್ನು ಸಿಬಿಐ ತನಿಖೆ ನಡೆಯಬೇಕೆಂದು ಒತ್ತಾಯಿಸಿದ ಪೋಸ್ಟ್ ವೊಂದನ್ನು ಗೃಹ ಸಚಿವ ಅಮಿತ್ ಶಾ ಅವರಿಗೆ ರಿಯಾ ಚಕ್ರವರ್ತಿ ಟ್ಯಾಗ್ ಮಾಡಿದ್ದರು.