Sunday, August 9, 2026

BDA Apartments

Home Cinema ಕೊರೊನಾ ಸೋಂಕಿತ ಐಶ್ವರ್ಯಾ ಸರ್ಜಾ ಆರೋಗ್ಯದಲ್ಲಿ ಚೇತರಿಕೆ

ಕೊರೊನಾ ಸೋಂಕಿತ ಐಶ್ವರ್ಯಾ ಸರ್ಜಾ ಆರೋಗ್ಯದಲ್ಲಿ ಚೇತರಿಕೆ

ಬೆಂಗಳೂರು, ಜುಲೈ 29, 2020 (www.justkannada.in): ನಟ ಅರ್ಜುನ್ ಸರ್ಜಾ ಪುತ್ರಿ, ನಟಿ ಐಶ್ವರ್ಯಾ ಸರ್ಜಾ ಕೋವಿಡ್ 19ರಿಂದ ಚೇತರಿಸಿಕೊಂಡಿದ್ದಾರೆ.

ಇತ್ತೀಚಿಗೆ ಕೊರೊನಾ ಪರೀಕ್ಷೆಗೆ ಒಳಗಾಗಿದ್ದೆ. ಕೊರೊನಾ ಪಾಸಿಟಿವ್ ಬಂದಿದೆ. ನಾನೀಗ ಮನೆಯಲ್ಲಿಯೇ ಕ್ವಾರಂಟೈನ್ ಆಗಿದ್ದೇನೆ. ವೈದ್ಯರ ಸಲಹೆ ಮೇರೆಗೆ ಎಲ್ಲಾ ಮುನ್ನೆಚ್ಚರಿಕೆಗಳನ್ನು ತೆಗೆದುಕೊಂಡಿದ್ದೇನೆ ಎಂದು ಐಶ್ವರ್ಯ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದರು.

ಕಳೆದ ಕೆಲವು ದಿನಗಳಿಂದ ನನ್ನ ಸಂಪರ್ಕದಲ್ಲಿದ್ದವರು ದಯವಿಟ್ಟು ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಐಶ್ವರ್ಯಾ ಸಾಮಾಜಿಕ ಜಾಲತಾಣದಲ್ಲಿ ಮನವಿ ಕೂಡ ಮಾಡಿದ್ದರು. ಇದೀಗ ಅವರು ಚೇತರಿಸಿಕೊಳ್ಳುತ್ತಿದ್ದಾರೆ.