Wednesday, August 5, 2026

BDA Apartments

Home Front Page ಮುಂದಿನ ಐದು ದಿನ ಭಾರಿ ಮಳೆ ಸಾಧ್ಯತೆ: ಉಡುಪಿ ಸೇರಿ ಐದು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್

ಮುಂದಿನ ಐದು ದಿನ ಭಾರಿ ಮಳೆ ಸಾಧ್ಯತೆ: ಉಡುಪಿ ಸೇರಿ ಐದು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್

ಬೆಂಗಳೂರು, ಆಗಸ್ಟ್ 01, 2020 (www.justkannada.in): ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ ಕೆಲವು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಉಡುಪಿ ಜಿಲ್ಲೆಯಲ್ಲಿ ಐದು ದಿನಗಳ ಕಾಲ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಉಡುಪಿ ಜಿಲ್ಲೆಯಲ್ಲಿ 115 ಮಿ.ಮೀ ಗಿಂತ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ.

ಜಿಲ್ಲೆಯಲ್ಲಿ ಸಾರ್ವಜನಿಕರು ಎಚ್ಚರ ವಹಿಸುವಂತೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಪ್ರಕಟಣೆಯಲ್ಲಿ ತಿಳಿಸಿದೆ.

ಜಿಲ್ಲಾ/ತಾಲೂಕು ಮಟ್ಟದ ಅಧಿಕಾರಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿ ಇರಬೇಕು. ಸಾರ್ವಜನಿಕರು ನದಿ, ಸಮುದ್ರಗಳಿಗೆ ಇಳಿಯಬಾರದು ಎಂದು ಪ್ರಾಧಿಕಾರ ಸೂಚನೆ ನೀಡಿದೆ.