Thursday, August 13, 2026

BDA Apartments

Home Front Page ಪಿಎಸ್ ಐ ಆತ್ಮಹತ್ಯೆ ಕೇಸ್: ಉನ್ನತ ಮಟ್ಟದ ತನಿಖೆಗೆ ಸರ್ಕಾರಕ್ಕೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ...

ಪಿಎಸ್ ಐ ಆತ್ಮಹತ್ಯೆ ಕೇಸ್: ಉನ್ನತ ಮಟ್ಟದ ತನಿಖೆಗೆ ಸರ್ಕಾರಕ್ಕೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಆಗ್ರಹ

ಬೆಂಗಳೂರು,ಆ,1,2020(www.justkannada.in):  ಚೆನ್ನರಾಯಪಟ್ಟಣ ಪಿಎಸ್ ಐ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉನ್ನತ ಮಟ್ಟದ ತನಿಖೆ ನಡೆಸುವಂತೆ ಸರ್ಕಾರಕ್ಕೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.jk-logo-justkannada-logo

ಈ ಸಂಬಂಧ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಪೊಲೀಸರು ಮತ್ತು ಹಿರಿಯ ಪೊಲೀಸ್ ಸಿಬ್ಬಂದಿ ಜೀವದ ಹಂಗು ತೊರೆದು ಹೋರಾಟ ಮಾಡುವ ಪರಿಸ್ಥಿತಿಯಲ್ಲಿ ಅವರ ಆತ್ಮಾಭಿಮಾನ, ಸ್ವಾಭಿಮಾನಕ್ಕೆ ಧಕ್ಕೆ ತರುವಂತೆ ಹಿರಿಯ ಅಧಿಕಾರಿಗಳು ಕಿರುಕುಳ ನೀಡಿದ್ದೇ ಪಿಎಸ್‌ಐ ಆತ್ಮಹತ್ಯೆಗೆ ಕಾರಣ ಎಂದು ಮೇಲ್ನೋಟಕ್ಕೆ ಗೊತ್ತಾಗಿದೆ ಎಂದು ಆರೋಪಿಸಿದ್ದಾರೆ.

ಆತ್ಮಹತ್ಯೆ ಮಾಡಿಕೊಂಡ ಕಿರಣ್ ಕುಮಾರ್ ಅವರ ಮೊಬೈಲ್ ಫೋನನ್ನು ಹಿರಿಯ ಪೊಲೀಸ್ ಅಧಿಕಾರಿಗಳು ಜಪ್ತಿ ಮಾಡಿದ್ದು  ಈ ಕುರಿತು ಹಲವು ಶಂಕೆ ವ್ಯಕ್ತವಾಗಿದೆ. ಹೀಗಾಗಿ ಸರ್ಕಾರ ಪ್ರಕರಣ ಕುರಿತು ಉನ್ನತ ಮಟ್ಟದ ತನಿಖೆ ನಡೆಸಬೇಕು ಎಂದು ಹೆಚ್.ಡಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.psi-suicide-case-former-cm-hd-kumaraswamy-high-level-investigation-govrnament

Key words: PSI -suicide case- Former CM -HD Kumaraswamy – high-level – Investigation-govrnament