Sunday, September 20, 2026

BDA Apartments

ವಾಲ್ಮೀಕಿ ನಿಗಮದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಎಸ್.ವಿ. ರಾಮಚಂದ್ರ… BDA JK...
Home Front Page ವಾಲ್ಮೀಕಿ ನಿಗಮದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಎಸ್.ವಿ. ರಾಮಚಂದ್ರ…

ವಾಲ್ಮೀಕಿ ನಿಗಮದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಎಸ್.ವಿ. ರಾಮಚಂದ್ರ…

ಬೆಂಗಳೂರು. ಆ. 6 ,2020(www.justkannada.in): ಜಗಳೂರು ಶಾಸಕರಾದ  ಎಸ್.ವಿ. ರಾಮಚಂದ್ರ ಅವರು ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮದ  ಅಧ್ಯಕ್ಷರಾಗಿ ಇಂದು ಅಧಿಕಾರ ಸ್ವೀಕರಿಸಿದರು.jk-logo-justkannada-logo

ಅಧಿಕಾರ ಸ್ವೀಕರಿಸಿದ ಬಳಿಕ ಅಧಿಕಾರಿಗಳೊಂದಿಗೆ ಅನೌಪಚಾರಿಕವಾಗಿ ಸಭೆ ನಡೆಸಿದ ಎಸ್.ವಿ. ರಾಮಚಂದ್ರ, ನಿಗಮದ ಕ್ರಿಯಾ ಯೋಜನೆ ಕುರಿತು ಚರ್ಚಿಸಿ, ಪರಿಶಿಷ್ಟ ಪಂಗಡ ಸಮುದಾಯದ ಕಲ್ಯಾಣಕ್ಕಾಗಿ  ರೂಪಿಸಿರುವ ಭೂ ಒಡೆತನ, ಗಂಗಕಲ್ಯಾಣ,  ಸ್ವಯಂ ಉದ್ಯೋಗ, ಮೈಕ್ರೋ ಕ್ರೆಡಿಟ್ ಯೋಜನೆ, ನಿರುದ್ಯೋಗಿ ಯುವಕ -ಯುವತಿಯರಿಗೆ ಉದ್ಯಮ ಶೀಲತಾ ಯೋಜನೆ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲು ಶ್ರಮಿಸಲಾಗುವುದು. ಜಿಲ್ಲಾ ಪ್ರವಾಸ ಕೈಗೊಂಡ ಪ್ರಗತಿ ಪರಿಶೀಲನೆ ನಡೆಸಿ, ತಾಂತ್ರಿಕ ಸಮಸ್ಯೆಗಳ ಇತ್ಯರ್ಥಕ್ಕೂ ಶ್ರಮಿಸಲಾಗುವುದು.  ನಿಗಮದ ಎಲ್ಲಾ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಸಮುದಾಯದ ಏಳಿಗೆಗಾಗಿ ಸ್ವಯಂ ಪ್ರೇರಿತವಾಗಿ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.valmiki-corporation-president-sv-ramachandra-power

ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಹನುಮನರಸಯ್ಯ  ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Key words: Valmiki Corporation-president – SV Ramachandra-power