Sunday, August 23, 2026

BDA Apartments

Home Front Page ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಟ್ಟುಹಬ್ಬ ಹಿನ್ನೆಲೆ: ಶುಭಕೋರಿದ ಸಿಎಂ ಬಿಎಸ್ ಯಡಿಯೂರಪ್ಪ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಟ್ಟುಹಬ್ಬ ಹಿನ್ನೆಲೆ: ಶುಭಕೋರಿದ ಸಿಎಂ ಬಿಎಸ್ ಯಡಿಯೂರಪ್ಪ

ಬೆಂಗಳೂರು,ಆ,12,2020(www.justkannada.in): ಇಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಟ್ಟುಹಬ್ಬ ಹಿನ್ನೆಲೆ ಸಿಎಂ ಬಿಎಸ್ ಯಡಿಯೂರಪ್ಪ ಟ್ವಿಟ್ ಮಾಡಿ ಸಿದ್ಧರಾಮಯ್ಯಗೆ ಶುಭಹಾರೈಸಿದ್ದಾರೆ.

ಹಿರಿಯ ರಾಜಕಾರಣಿ ಮಾಜಿ ಮುಖ್ಯಮಂತ್ರಿಗಳು, ವಿರೋಧ ಪಕ್ಷದ ನಾಯಕರು ಆತ್ಮೀಯರೂ ಆಗಿರುವ ಶ್ರೀ ಸಿದ್ಧರಾಮಯ್ಯ ಅವರಿಗೆ ಜನ್ಮದಿನದ ಶುಭಾಶಯಗಳು. ದೇವರ ಅನುಗ್ರಹ ಸದಾ ಇರಲಿ ಎಂದು ಹಾರೈಸುತ್ತೇನೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಟ್ವೀಟ್ ಮಾಡಿ ಶುಭಕೋರಿದ್ದಾರೆ. Former  CM-Siddaramaiah's- Birthday - CM BS Yeddyurappa-Wishes

ಸಿಎಂ ಬಿಎಸ್ ವೈ, ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಸೇರಿದಂತೆ ವಿವಿಧ ಗಣ್ಯರು ಶುಭ ಹಾರೈಸಿದ್ಧಾರೆ. ಸಿದ್ದರಾಮಯ್ಯ ಹುಟ್ಟು ಹಬ್ಬ ಪ್ರಯುಕ್ತ ನಗರದಲ್ಲಿ ಹಲವು ಕಾರ್ಯಕ್ರಮಗಳ ಆಯೋಜನೆ ಮಾಡಲಾಗಿದೆ. ಕಾಂಗ್ರೆಸ್ ಕಾರ್ಯಕರ್ತರು  ಪೌರಕಾರ್ಮಿಕರಿಗೆ ಆಹಾರ ಕಿಟ್ ವಿತರಣೆ ಸೇರಿದಂತೆ ಹಲವು ಕಾರ್ಯಕ್ರಯಗಳನ್ನು ಆಯೋಜಿಸಿದ್ದಾರೆ.

ಸದ್ಯ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿರುವ ಸಿದ್ದರಾಮಯ್ಯ ಕೊರೊನಾ ಪರೀಕ್ಷಾ ವರದಿಯಲ್ಲಿ ನೆಗೆಟಿವ್ ಬಂದಿರುವ ಹಿನ್ನೆಲೆನಾಳೆ ಆಸ್ಪತ್ರೆಯಿಂದ ಸಿದ್ದರಾಮಯ್ಯ ಬಿಡುಗಡೆ ಸಾಧ್ಯತೆ ಇದೆ.

Key words: Former  CM-Siddaramaiah’s- Birthday – CM BS Yeddyurappa-Wishes